ತಹಸೀಲ್ದಾರ್ ವರ್ಗಾವಣೆಗೆ ಒತ್ತಾಯ
ಕಪ್ರ ವಾರ್ತೆ, ಚಿಕ್ಕಮಗಳೂರು, ಮಾ. 4
ಮತದಾರರ ಪಟ್ಟಿಯಲ್ಲಿ ಕೆಲವು ಲೋಪದೋಷಗಳಾಗಿದ್ದು, ಇದಕ್ಕೆ ಕಾರಣಕರ್ತರಾದ ಚಿಕ್ಕಮಗಳೂರು ತಹಸೀಲ್ದಾರ್ ಅವರನ್ನು ಕೂಡಲೇ ವರ್ಗಾವಣೆ ಮಾಡುವಂತೆ ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಕಾರ್ಯಕರ್ತರು, ತಾಲೂಕು ಕಚೇರಿ ಎದುರು ತಹಸೀಲ್ದಾರ್ ಪ್ರತಿಕೃತಿ ದಹನ ಮಾಡಿದರು.
ಪ್ರಜಾಪ್ರಭುತ್ವದ ಕಗ್ಗೊಲೆ: ಇದೇ ಸಂದರ್ಭದಲ್ಲಿ ಚಿಕ್ಕಮಗಳೂರು ಉಪ ವಿಭಾಗಾಧಿಕಾರಿ ಡಾ. ಪ್ರಶಾಂತ್ ಅವರಿಗೆ ಮನವಿಯನ್ನು ಸಲ್ಲಿಸಿ, ನಗರದ 9, 11, 12, 14 ಹಾಗೂ 15 ವಾರ್ಡ್ಗಳು ಸೇರಿದಂತೆ ಇತರೆ ವಾರ್ಡ್ಗಳಲ್ಲಿ ಮತದಾರರ ಪಟ್ಟಿಯಲ್ಲಿ ಇರುವ ಹೆಸರುಗಳನ್ನು ಬೇರೆ ವಾರ್ಡ್ಗಳ ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲಾಗಿದೆ.
ಇದಕ್ಕೆ ನೇರ ಹೊಣೆಗಾರರು ತಹಸೀಲ್ದಾರ್ ಅವರು, ಆಡಳಿತ ಪಕ್ಷದೊಂದಿಗೆ ಶಾಮೀಲಾಗಿ ಈ ಕೆಲಸ ಮಾಡಿದ್ದಾರೆ. ಇದು, ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ಹೇಳಿದ್ದಾರೆ.
ಈ ಲೋಪದೋಷವನ್ನು ಕೂಡಲೇ ಸರಿಪಡಿಸಿ ಮುಕ್ತ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

