ಕೆಜೆಪಿ ಅಭ್ಯರ್ಥಿಗೆ ಬೆದರಿಕೆ: ಆರೋಪ
ಶಿವಮೊಗ್ಗ: ಕೆಲ ವಾರ್ಡ್ಗಳಲ್ಲಿ ಕೆಜೆಪಿ ಅಭ್ಯರ್ಥಿಗಳಿಗೆ ಬಿಜೆಪಿ ಬೆದರಿಕೆ ಹಾಕುತ್ತಿದೆ. ಕಣದಿಂದ ವಾಪಸ್ ಸರಿಯುವಂತೆ ಮಾಡಲು ಆಮಿಷವೊಡ್ಡುತ್ತಿದೆ ಎಂದು ಕರ್ನಾಟಕ ಜನತಾ ಪಕ್ಷದ ಜಿಲ್ಲಾಧ್ಯಕ್ಷ ಜ್ಯೋತಿಪ್ರಕಾಶ್ ಆರೋಪ ಮಾಡಿದ್ದಾರೆ. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 21ನೇ ವಾರ್ಡ್ನ ಸಿ. ಪ್ರಕಾಶ್, 12ನೇ ವಾರ್ಡ್ನ ಮೋಹನ್ರಾಜ್ ಅವರಿಗೆ ಬಿಜೆಪಿ ಮುಖಂಡರು ಬೆದರಿಕೆ ಹಾಕಿದ್ದಾರೆ. ಉಪಮುಖ್ಯಮಂತ್ರಿಯಿಂದ ಹಿಡಿದು ಎಲ್ಲರೂ ಇದಕ್ಕೆ ಜವಾಬ್ದಾರರು. ಈ ಸಂಬಂಧ ಚುನಾವಣಾಧಿಕಾರಿಯವರಿಗೆ ದೂರು ನೀಡಲಾಗಿದೆ ಎಂದಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಸಾಕಷ್ಟು ಅನುದಾನ ನೀಡಿದ್ದರು. ಆದರೆ ಅಧಿಕಾರದಲ್ಲಿದ್ದ ಬಿಜೆಪಿ ಕಳಪೆ ಕಾಮಗಾರಿ ನಡೆಸಿದೆ. ಹಸರೀಕರಣ ಲೆಕ್ಕಪತ್ರ ಒಪ್ಪದ ಜಿಲ್ಲಾಧಿಕಾರಿಯವರನ್ನೇ ಎತ್ತಂಗಡಿ ಮಾಡಿರುವುದು ಇವರು ನಡೆಸಿರುವ ಭ್ರಷ್ಟಾಚಾರಕ್ಕೆ ಉದಾಹರಣೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

