ನಗರ, ಹಳ್ಳಿ ಅಂತರ ದೂರಮಾಡಿ ಶಾಸಕ ಸುರೇಶ್
ಕ.ಪ್ರ.ವಾರ್ತೆ, ತರೀಕೆರೆ: ಮಾರ್ಚಿ.4 ನಗರ ಮತ್ತು ಹಳ್ಳಿಗಳ ಮಧ್ಯೆ ಇರುವ ಅಂತರ ದೂರವಾಗಬೇಕಿದೆ ಎಂದು ಶಾಸಕ ಡಿ.ಎಸ್. ಸುರೇಶ್
ಹೇಳಿದರು.
ಅವರು, ಸಮೀಪದ ಬೆಟ್ಟತಾವರೆಕೆರೆಯಲ್ಲಿ ಎಸ್.ಜೆ.ಎಂ. ಕಾಲೇಜು ವತಿಯಿಂದ ಏರ್ಪಡಿಸಲಾಗಿದ್ದ ಎನ್ನೆಸ್ಸೆಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಅಧ್ಯಯನದ ಜೊತೆಗೆ- ವ್ಯಕ್ತಿ ವ್ಯಕ್ತಿಗಳ ನಡುವೆ ಅಂತರ ದೂರವಾಗಿ ಪರಸ್ಪರ ಪ್ರೀತಿ, ವಿಶ್ವಾಸ, ಸಹಬಾಳ್ವೆ ಮೂಲಕ ನಮ್ಮ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣ ಸಾಧ್ಯವಾಗುತ್ತದೆ, ಭವ್ಯ ಭವಿಷ್ಯದ ಪ್ರಜೆಗಳಾದ ವಿದ್ಯಾರ್ಥಿಗಳು, ವಿದ್ಯಾಭ್ಯಾಸದ ದೆಸೆಯಲ್ಲಿಯೇ ಅಧ್ಯಯನದ ಜೊತೆಗೆ ಗ್ರಾಮಾಂತರ ಪ್ರದೇಶದ ನಂಟನ್ನು ಬೆಳೆಸಿಕೊಳ್ಳುವುದರ ಮೂಲಕ ಅವರ ಸಮಸ್ಯೆ ಅರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಮೂಲ ಸೌಕರ್ಯದ ಅರಿವು: ಈ ವಿಶೇಷ ಶಿಬಿರದಲ್ಲಿ ವಿದ್ಯಾರ್ಥಿಗಳು ಗ್ರಾಮೀಣಗರಿಗೆ ಮೂಲ ಸೌಕರ್ಯದ ಅರಿವು, ಪರಿಸರ ಸಾರ್ವಜನಿಕರ ಆರೋಗ್ಯ ಕಾನೂನಿನ ಅರಿವು ಇತ್ಯಾದಿ ಕಾರ್ಯಕ್ರಮಗಳ ಮೂಲಕ ಜನರ ಪ್ರೀತಿ ವಿಶ್ವಾಸ ಗಳಿಸಬೇಕು ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷ ಕೆ.ಎನ್.ಉಮಾಪತಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಗುರು ಮತ್ತು ಶ್ರದ್ಧೆ ಇದ್ದಲ್ಲಿ ಯುವಕರು ಏನನ್ನು ಬೇಕಾದರೂ ಸಾಧಿಸಲು ಸಾಧ್ಯವಿದೆ. ಇಂತಹ ಶಿಬಿರಗಳಲ್ಲಿ ಭಾಗವಹಿಸುವುದರ ಮೂಲಕ ಅವರಲ್ಲಿ ಆತ್ಮವಿಶ್ವಾಸ ಮೂಡುತ್ತದೆ ಎಂದರು.
ಜಿಪಂ ಸದಸ್ಯ ಕೆ.ಆರ್. ಆನಂದಪ್ಪ, ಎಸ್.ಬಿ. ಆನಂದಪ್ಪ, ಎಪಿಎಂಸಿ ಅಧ್ಯಕ್ಷ ಶಿವಕುಮಾರ್, ಗ್ರಾಪಂ ಸದಸ್ಯೆ ಮಂಜುಳಮ್ಮ, ಪ್ರಾಚಾರ್ಯರಾದ ಕೆ.ವಿ. ಸಜ್ಜನ ಶೆಟ್ಟರ್, ಸಿ.ಇ. ಜಯದೇವಪ್ಪ, ಯೋಗೀಶ್, ಶಿವರಾಜ್ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

