ಚಿಕ್ಕಮಗಳೂರು

ಶೃಂಗೇರಿ ಪಪಂ: ಜೆಡಿಎಸ್‌ಗೆ ವಿಶ್ವಾಸ

Published On :

ಕೊಪ್ಪ: ಶೃಂಗೇರಿ ಕ್ಷೇತ್ರದ ಮೂರು ಸ್ಥಳೀಯ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳು ಗೆಲವು ಸಾಧಿಸುವ ವಿಶ್ವಾಸವಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಹೇಳಿದರು.
ಸೋಮವಾರ ಇಲ್ಲಿನ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 4ನೇ ವಾರ್ಡಿನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಯ ಪರವಾದ ಮತಯಾಚನೆ ಮಾಡುವ ಸಂದರ್ಭದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕೊಪ್ಪ, ಶೃಂಗೇರಿ, ಎನ್.ಆರ್. ಪುರ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಪ್ರವಾಸ ಮಾಡಿದ್ದು, ಪಕ್ಷದ ಅಭ್ಯರ್ಥಿಗಳ ಗೆಲವಿಗೆ ಪೂರಕವಾದ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿಯ ಭ್ರಷ್ಟಾಚಾರ, ಸ್ವಜನಪಕ್ಷ ಆಡಳಿತ ದಿಂದ ಜನ ಬೇಸರ ಹೊಂದಿದ್ದಾರೆ. ಅಧಿಕಾರಕ್ಕೆ ಬಂದ ಬಿಜೆಪಿ ಜನರ ಸಮಸ್ಯೆಗಳನ್ನು ಬಗೆಹರಿಸುವ ಬದಲು ಗೊಂದಲದಲ್ಲೆ ಕಾಲ ಕಳೆದರು ಎಂದು ದೂರಿದರು.
ಮತದಾರರಲ್ಲಿ ಮತಯಾಚನೆ ಮಾಡುವ ಸಮಯದಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಣವೆ ವಿನಯ್, ತಾಲೂಕು ಅಧ್ಯಕ್ಷ ಕೆ.ಕೆ. ಸಾಯಿನಾಥ್, ಪಕ್ಷದ ಮುಖಂಡರಾದ ಕಡಪ್ಪಗೌಡ, ಎಚ್.ಡಿ.ಶ್ರೀನಿವಾಸ್, ಎಚ್.ಕೆ. ಸುರೇಶ್, ಎಚ್.ಆರ್. ಸಂಜೀವ ಮತ್ತು ವಾರ್ಡ್‌ನ ಅಭ್ಯರ್ಥಿಗಳು,  ಮತ್ತಿತರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.