ಚಿಕ್ಕಮಗಳೂರು

ಕಾಂಗ್ರೆಸ್ ಗೆಲವು ನಿಶ್ಚಿತ: ಶರತ್

Published On :

ಕ.ಪ್ರ. ವಾರ್ತೆ, ಕಡೂರು, ಮಾ.5
ಜೆಡಿಎಸ್ ಪಕ್ಷದ ಆಡಳಿತದಿಂದ ಬೇಸತ್ತಿರುವ ಕಡೂರು ಪಟ್ಟಣದ ನಾಗರಿಕರು ಈ ಭಾರಿಯ ಪುರಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಯುವ ಕಾಂಗ್ರೆಸ್ ಮುಖಂಡ ಶರತ್‌ಕೃಷ್ಣಮೂರ್ತಿ ಹೇಳಿದರು.
ಕಡೂರು ಪಟ್ಟಣದಲ್ಲಿ ಪುರಸಭೆಯ ಚುನಾವಣೆಯ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತಯಾಚನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2008 ರಿಂದ ಕಡೂರು ಪುರಸಭೆಯಲ್ಲಿ ಆಡಳಿತ ನಡೆಸಿದ ಜೆಡಿಎಸ್ ಪಕ್ಷವು ಪುರಸಭೆಯಲ್ಲಿ ಹಲವಾರು ಅವ್ಯವಹಾರಗಳನ್ನು ನಡೆಸುವ ಮೂಲಕ ಯಾವುದೇ ಅಭಿವೃದ್ಧಿ ಕೈಗೊಳ್ಳದೆ ಜನರಿಗೆ ಭ್ರಮನಿರನಸ ಉಂಟುಮಾಡಿದೆ. ಜೆಡಿಎಸ್ ಆಡಳಿತವನ್ನು ನೋಡಿ ಬೇಸತ್ತಿರುವ ಜನರ ಒಲವು  ಕಾಂಗ್ರೆಸ್‌ನತ್ತ ವಾಲುತ್ತಿದೆ ಎಂದರು.
ಕಡೂರು ಪಟ್ಟಣದ 23 ವಾರ್ಡುಗಳಲ್ಲಿಯೂ ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದ್ದು, ಎಲ್ಲ ವಾರ್ಡುಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.