ಚಿಕ್ಕಮಗಳೂರು

ಅಕ್ರಮ ಗುಡಿಸಲಿಗೆ ಬೆಂಕಿ: ಲಘು ಲಾಠಿ ಪ್ರಹಾರ

Published On :

ಚಿಕ್ಕಮಗಳೂರು: ಖಾಲಿ ನಿವೇಶನದಲ್ಲಿ ರಾತ್ರೋರಾತ್ರಿ ನಿರ್ಮಾಣಗೊಂಡಿದ್ದ ಗುಡಿಸಲುಗಳಿಗೆ ಸಾರ್ವಜನಿಕರು ಬೆಂಕಿ ಹಚ್ಚಿದ್ದರು. ಆ ವೇಳೆ ಭಾರೀ ಸಂಖ್ಯೆಯಲ್ಲಿ ಸ್ಥಳದಲ್ಲಿ ಜನರು ನೆರೆದು, ಗೊಂದಲ ಸೃಷ್ಟಿಯಾಗಿದ್ದು, ಗುಂಪನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿರುವ ಘಟನೆ ಇಲ್ಲಿನ ಚಂದ್ರನಗರ ಬಡಾವಣೆಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಮತದಾರರನ್ನು ಸೆಳೆಯಲು ಬಿಜೆಪಿ ಅಭ್ಯರ್ಥಿ ಅಕ್ರಮವಾಗಿ ಗುಡಿಸಲು ನಿರ್ಮಾಣಕ್ಕೆ ಕುಮ್ಮಕ್ಕು ನೀಡಿದ್ದಾರೆಂದು ಕೆಲವರು ಆರೋಪಿಸಿದ್ದಾರೆ. ನಗರಸಭೆಯ 35ನೇ ವಾರ್ಡಿನ ವ್ಯಾಪ್ತಿಗೆ ಒಳಪಡಲಿರುವ ಚಂದ್ರನಗರ ಬಡಾವಣೆಯಲ್ಲಿ ಸುಮಾರು 200ಕ್ಕೂ ಹೆಚ್ಚು ಮನೆಗಳಿದ್ದು, ಇಲ್ಲೇ ಇರುವ ಸರ್ಕಾರಿ ಜಾಗದಲ್ಲಿ ಮಂಗಳವಾರ ರಾತ್ರಿ ಮೂರು ಗುಡಿಸಲು ನಿರ್ಮಾಣವಾಗಿವೆ. ಬೆಳಗಾಗುತ್ತಿದ್ದಂತೆ ಅಕ್ರಮ ಗುಡಿಸಲು ನಿರ್ಮಾಣವಾಗಿರುವುದನ್ನು ಗಮನಿಸಿದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಲಾಠಿ ಪ್ರಹಾರ: ಭಾರೀ ಸಂಖ್ಯೆಯಲ್ಲಿ ಸೇರಿದ್ದ ಜನರು ಗುಡಿಸಲುಗಳಿಗೆ ಬೆಂಕಿ ಹಚ್ಚಿದರು. ಈ ವಿಷಯ ತಿಳಿಯುತ್ತಿದ್ದಂತೆ ಇಬ್ಬರು ಪೊಲೀಸರು ಚಂದ್ರನಗರಕ್ಕೆ ಬರುವ ಮಾರ್ಗದಲ್ಲಿ ಗುಂಪಾಗಿ ನಿಂತಿದ್ದ ಯುವಕರನ್ನು ಚದುರಿಸಲು ಲಾಠಿ ಬೀಸಿದರು. ಆಗ ಕುಪಿತಗೊಂಡ ಮಹಿಳೆಯರು ಹಾಗೂ ಪುರುಷರು ಏಕಾಏಕಿ ಪೊಲೀಸರ ವಿರುದ್ಧ ತಿರುಗಿ ಬಿದ್ದರು. ಕೆಲ ಸಮಯದ ನಂತರ ಸುಮಾರು ಐದಾರು ವಾಹನಗಳಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.