ಚಿಕ್ಕಮಗಳೂರು

ದ್ವಂದ್ವ ನಿಲುವು ಸರಿಯಲ್ಲ: ರಂಜನ್

Published On :

ಮೂಡಿಗೆರೆ: ಪಟ್ಟಣ ಪಂಚಾಯತ್‌ನಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಕೆಜೆಪಿ ಅಭ್ಯರ್ಥಿಗಳ ವಿರುದ್ಧ ಅಪಪ್ರಚಾರದಲ್ಲಿ ತೊಡಗಿರುವುದರ ಕುರಿತು ಮತದಾರರು ದ್ವಂದ್ವ ನಿಲುವು ತಳೆಯಬಾರದು ಎಂದು ಕೆಜೆಪಿ ಜಿಲ್ಲಾ ಯುವ ಘಟಕದ ಅಧ್ಯಕ್ಷ ರಂಜನ್ ಅಜೀತ್‌ಕುಮಾರ್ ಮನವಿ ಮಾಡಿದ್ದಾರೆ.
ಈ ಕುರಿತು ಬುಧವಾರ ಹೇಳಿಕೆ ನೀಡಿದ್ದು, ಸ್ಥಳೀಯಾಡಳಿತ ಚುನಾವಣೆಯಲ್ಲಿ ಸೆಡ್ಡು ಹೊಡೆಯಲು ಸಜ್ಜಾಗಿರುವ ಕೆಜೆಪಿ ಅಭ್ಯರ್ಥಿಗಳು ಅತ್ಯಂತ ಬಲಾಡ್ಯರಾಗಿರುವುದನ್ನು ಮನಗಂಡಿರುವ ಈ ಮೂರೂ ಪಕ್ಷಗಳು ಹೊಂದಾಣಿಕೆ ಮಾಡಿಕೊಂಡಿರುವುದಾಗಿ ಹೇಳಿ ಮತದಾರರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ. ಜಿಲ್ಲೆಯ ಯಾವುದೇ ಕ್ಷೇತ್ರಗಳಲ್ಲಿಯೂ ಕೆಜೆಪಿ ಅಭ್ಯರ್ಥಿಗಳು ಯಾರೊಂದಿಗೂ ಒಪ್ಪಂದ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕೆಲವು ರಾಜಕೀಯ ಪಕ್ಷಗಳು ನಮ್ಮ ಅಭ್ಯರ್ಥಿಗಳನ್ನು ಎದುರಿಸಲು ಶಕ್ತಿಯಿಲ್ಲದಿರುವುದರಿಂದ ಬೇರೆ ಪಕ್ಷದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಮಾತುಗಳಿವೆ. ಅದರ ಸತ್ಯಾಸತ್ಯತೆಗಳ ಕುರಿತು ತಿಳಿದಿಲ್ಲ. ಆ ಕುರಿತು ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.