24ರಂದು ಬಾಳೆಹೊನ್ನೂರಿನಲ್ಲಿ ಜಿಲ್ಲಾ ಮಾಧ್ಯಮ ಸಮ್ಮೇಳನ
ನರಸಿಂಹರಾಜಪುರ: ಚಿಕ್ಕಮಗಳೂರು ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಆಶ್ರಯದಲ್ಲಿ ಚಿಕ್ಕಮಗಳೂರು ಜಿಲ್ಲಾ ಪ್ರಥಮ ಮಾಧ್ಯಮ ಸಮ್ಮೇಳನವನ್ನು ಬಾಳೆಹೊನ್ನೂರಿನಲ್ಲಿ 24 ರಂದು ಏರ್ಪಡಿಸಲಾಗಿದೆ ಎಂದು ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಚಿ.ಸ.ಪ್ರಭುಲಿಂಗಶಾಸ್ತ್ರಿ ತಿಳಿಸಿದ್ದಾರೆ.
ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ 23 ರಿಂದ 29 ರ ವರೆಗೆ ಜಗದ್ಗುರು ರೇಣಕಾಚಾರ್ಯ ಜಯಂತಿ ಯುಗಮಾನೋತ್ಸವ ನಡೆಯಲಿದ್ದು, 24 ರಂದು ಮಾಧ್ಯಮ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ದೈನಿಕ, ಸಾಪ್ತಾಹಿಕ, ಪಾಕ್ಷಿಕ, ಮಾಸಿಕ ಪತ್ರಿಕೆಗಳ ಸಂಪಾದಕರು ಹಾಗೂ ವರದಿಗಾರರು, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಪತ್ರಿಕೆಗಳ ವರದಿಗಾರರು,ಪ್ರತಿನಿಧಿಗಳು, ಆಕಾಶವಾಣಿ ಹಾಗೂ ದೂರದರ್ಶನ ವಾಹಿನಿಗಳ ಜಿಲ್ಲಾ ವರದಿಗಾರರು ಮತ್ತು ಪ್ರತಿನಿಧಿಗಳು ಪತ್ರಿಕಾ ಛಾಯಾಗ್ರಾಹಕರು, ವ್ಯಂಗ ಚಿತ್ರಕಾರರು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೆ ಜಿಲ್ಲೆಯ ಸುದ್ದಿ ಸಂಸ್ಥೆ ಮತ್ತು ಜಾಹೀರಾತು ಸಂಸ್ಥೆಗಳ ಪ್ರತಿನಿಧಿಗಳು, ಅಂಕಣರಕಾರರು, ಹವ್ಯಾಸಿ ಪತ್ರಕರ್ತರು, ಹಿರಿಯ ಪತ್ರಕರ್ತರು, ನಿವೃತ್ತ ಪತ್ರಕರ್ತರು ಸಮ್ಮೇಳನಕ್ಕೆ ಆಗಮಿಸಲಿದ್ದಾರೆ.
ಪರಿಚಯ ಹೊತ್ತಿಗೆ ಬಿಡುಗಡೆ: ಇದೇ ಸಂದರ್ಭದಲ್ಲಿ ಜಿಲ್ಲೆಯ ಪತ್ರಿಕೆಗಳು ಸೇರಿದಂತೆ ಮಾಧ್ಯಮಗಳ ಸಮಗ್ರ ಆತ್ಮವಲೋಕನ ಹಿರಿಯರ ನೆನಪು ಸಮಕಾಲೀನ ಪತ್ರಕರ್ತರ ಮಾಹಿತಿಯನ್ನೊಳಗೊಂಡ ಪರಿಚಯ ಹೊತ್ತಿಗೆ ಬಿಡುಗಡೆಯಾಗಲಿದೆ. ಇದಕ್ಕೆ ಸೂಕ್ತವಾಗಿ ಹೊಂದುವ ಲೇಖನಗಳಿದ್ದರೆ ತಕ್ಷಣ ಕಳುಹಿಸಬಹುದು. ತಮ್ಮ ಇತ್ತೀಚಿನ ಭಾವಚಿತ್ರ, ದೂರವಾಣಿ, ಇ-ಮೇಲ್ ವಿಳಾಸ ಸಹಿತ ಪೂರ್ಣ ವಿವರಗಳನ್ನು ಈ ಕೆಳಗಿನ ವಿಳಾಸಕ್ಕೆ ಕಳಿಸಬಹುದು. ಚಿ.ಸ. ಪ್ರಭುಲಿಂಗಶಾಸ್ತ್ರಿ, ಕಾರ್ಯಾಧ್ಯಕ್ಷ, ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ, ಸದಾಶಿವ ಕೃಪಾ, ಪಿ.ಎನ್.ಬಿ. ಆವರಣ, 2 ನೇ ಮುಖ್ಯರಸ್ತೆ, ವಿಜಯಪುರ, ಚಿಕ್ಕಮಗಳೂರು. ಮೊ- 9449896633.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

