ಚಿಕ್ಕಮಗಳೂರು

ಎರಡು ಗುಂಪಿನ ನಡುವೆ ಘರ್ಷಣೆ: ಐವರಿಗೆ ಗಾಯ

Published On :

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ. 8
ಹಳೆಯ ವೈಷಮ್ಯದಿಂದಾಗಿ ಎರಡು ಗುಂಪಿನ ನಡುವೆ ಶುಕ್ರವಾರ ರಾತ್ರಿ ನಗರದಲ್ಲಿ ಘರ್ಷಣೆ ನಡೆದಿದ್ದು, ಇದರಲ್ಲಿ ಐವರಿಗೆ ಗಾಯಗಳಾಗಿವೆ. ತೀವ್ರವಾಗಿ ಗಾಯಗೊಂಡ ಈರ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.  ಇಲ್ಲಿನ ನೆಹರು ನಗರದಲ್ಲಿರುವ ಸಹರಾ ಶಾದಿಮಹಲ್ ಬಳಿ ಮುಸ್ಲಿಂ ಜನಾಂಗದ ಎರಡು ಗುಂಪುಗಳ ನಡುವೆ ಶುಕ್ರವಾರ ರಾತ್ರಿ 8.30ರ ಸಮಯದಲ್ಲಿ ಈ ಘರ್ಷಣೆ ನಡೆದಿದೆ. ಎರಡು ಗುಂಪುಗಳ ನಡುವೆ ಘರ್ಷಣೆಗೆ ಹಳೆಯ ದ್ವೇಷವೇ ಕಾರಣ ಎನ್ನಲಾಗಿದೆ.  ಅಂದರೆ ಕಳೆದ ಆರೇಳು ತಿಂಗಳ ಹಿಂದೆ ಇಲ್ಲಿನ ಮಲ್ಲಂದೂರು ರಸ್ತೆಯಲ್ಲಿರುವ ಜಿಮ್ ಒಳಗೆ ನುಗ್ಗಿದ ಯುವಕರ ಗುಂಪೊಂದು ಅಲ್ಲಿದ್ದವರನ್ನು ಮನಬಂದಂತೆ ಥಳಿಸಿತ್ತು. ಅಂದಿನಿಂದ ಈ ಎರಡು ಗುಂಪುಗಳ ನಡುವೆ ದ್ವೇಷ ಹುಟ್ಟಿಕೊಂಡಿತ್ತು ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.