ಚಿಕ್ಕಮಗಳೂರು

ಹಿರಿಯ ಶಿಕ್ಷಕಿಯರಿಗೆ ಸನ್ಮಾನ

Published On :

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ. 8
ಮಹಿಳಾ ಸಮುದಾಯದ ಶೈಕ್ಷಣಿಕ ಅಭಿವೃದ್ಧಿಗೆ ದುಡಿದ ಹಿರಿಯ ಶಿಕ್ಷಕಿಯರನ್ನು ಸನ್ಮಾನಿಸಿ ಗೌರವಿಸುವ ಮೂಲಕ ಟೌನ್ ಮಹಿಳಾ ಸಮಾಜದ ಸದಸ್ಯರು ನಗರದಲ್ಲಿ ಶುಕ್ರವಾರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಿದರು.
ಎಂಎಲ್‌ವಿ ರೋಟರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಟೌನ್ ಮಹಿಳಾ ಸಮಾಜದ ಹಿರಿಯ ಶಿಕ್ಷಕಿ ಶಾರದಾ ಉದ್ಘಾಟಿಸಿದರು. ಟೌನ್ ಮಹಿಳಾ ಸಮಾಜದ ಕಾರ್ಯದರ್ಶಿ ಗೀತಾ ಎಂ.ಎಲ್. ಮೂರ್ತಿ ಮಾತನಾಡಿ, ಸ್ತ್ರೀ ಸಮುದಾಯದ ಮೇಲೆ ನಿರಂತರವಾಗಿ ನಡೆಯುತ್ತಿರುವ ಶೋಷಣೆಗಳ ವಿರುದ್ಧ ಮಹಿಳೆಯರು ಸಂಘಟಿತರಾಗುವುದು ಅತ್ಯಗತ್ಯ ಎಂದರು.
ಶಿಕ್ಷಕಿಯರಾದ ಶಾರದಾ, ಮಂಜುಳಾ ಮತ್ತು ಲಿಲ್ಲಿ ಫರ್ನಾಂಡೀಸ್‌ರನ್ನು ಸನ್ಮಾನಿಸಲಾಯಿತು. ಮಹಿಳಾ ದಿನಾಚರಣೆ ಅಂಗವಾಗಿ ರಸಪ್ರಶ್ನೆ, ವೇಷ ಭೂಷಣ ಸ್ಪರ್ಧೆ ಸೇರಿದಂತೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಸಲಾಗಿತ್ತು. ಸಂಘದ ಮಾಜಿ ಅಧ್ಯಕ್ಷೆ ಕ್ಯಾತಾಯಿನಿ ಚಂದ್ರಶೇಖರ್, ಉಪಾಧ್ಯಕ್ಷೆ ತಾರಾ ಬೋಜೇಗೌಡ, ಸದಸ್ಯರಾದ ಸುಲೋಚನಾ ಶ್ರೀನಿವಾಸ್‌ಶೆಟ್ಟಿ, ರಾಜೇಶ್ವರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.