ಮತ ಎಣಿಕೆ ನಡೆವ ಕಾಲೇಜುಗಳಿಗೆ ರಜೆ (ಸುದ್ದಿ ಸಂಕ್ಷೇಪ)
ಚಿಕ್ಕಮಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಮಾ. 11ರಂದು ನಡೆಯಲಿದ್ದು, ಮತ ಎಣಿಕೆ ನಡೆಯುವ ಶಿಕ್ಷಣ ಸಂಸ್ಥೆಗಳಿಗೆ ಅಂದು ರಜೆ ಘೋಷಿಸಲಾಗಿದೆ.ಚಿಕ್ಕಮಗಳೂರಿನ ಬೇಲೂರು ರಸ್ತೆಯ ಎಸ್.ಟಿ.ಜೆ. ಕಾಲೇಜು, ಕೊಪ್ಪ ತಾಲೂಕಿನ ಬಾಲಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಕಡೂರು ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ತರೀಕೆರೆಯ ಎಸ್.ಜೆ.ಎಂ.ಪಿ.ಯು ಕಾಲೇಜಿನಲ್ಲಿ ಮತ ಎಣಿಕೆ ನಡೆಯುವ ಹಿನ್ನೆಲೆಯಲ್ಲಿ ಈ ಕಾಲೇಜುಗಳಿಗೆ ಅಂದು ರಜೆ ಘೋಷಿಸಲಾಗಿದೆ.
ಶೃಂಗೇರಿಯಲ್ಲಿ ಮಳೆ
ಶೃಂಗೇರಿ: ತಾಲೂಕಿನ ವಿವಿಧೆಡೆ ಕಳೆದೆರೆಡು ದಿನಗಳಿಂದ ಸಾದಾರಣ ಮಳೆ ಬೀಳುತ್ತಿದ್ದು, ಪಟ್ಟಣ ಸೇರಿದಂತೆ ಗ್ರಾಮೀಣ ಪ್ರದೇಶದ ಕೆಲವೆಡೆ ಶುಕ್ರವಾರ ಸಂಜೆಯ ವೇಳೆ ಮಳೆ ಬಿದ್ದಿದೆ. ಗುರುವಾರ ಗುಡುಗು ಸಹಿತ ಮಳೆ ಬಂದಿತ್ತು. ಮಳೆ ಬೀಳುತ್ತಿದ್ದರೂ ಬಿಸಿಲ ದಗೆ ಹೆಚ್ಚುತ್ತಿದೆ. ಕೆಲವೆಡೆ ಕುಡಿಯುವ ನೀರಿಗೂ ಬರ ಉಂಟಾಗಿದೆ. ಶನಿವಾರ ಸಂಜೆಯವರೆಗೆ ಮೋಡಕವಿದ ವಾತಾವರಣ ಉಂಟಾಗಿತ್ತು.
ಮತ ಎಣಿಕೆ ಸಿಬ್ಬಂದಿಗೆ ತರಬೇತಿ
ನರಸಿಂಹರಾಜಪುರ: ಪಟ್ಟಣ ಪಂಚಾಯ್ತಿ ಚುನಾವಣೆಯ ಮತ ಎಣಿಕೆಯ ಸಿಬ್ಬಂದಿಗೆ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ಶುಕ್ರವಾರ ತರಬೇತಿ ನೀಡಲಾಯಿತು. ಚುನಾವಣಾಧಿಕಾರಿ ಬಿ.ಜಿ. ಮಾಳಮ್ಮನವರ್ ಮತ ಯಂತ್ರದ ಮೂಲಕ ಮತ ಎಣಿಕೆ ನಡೆಸುವ ರೀತಿಯನ್ನು ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಿದರು. ತಹಸೀಲ್ದಾರ್ ಜೆ. ಕೃಷ್ಣಮೂರ್ತಿ ಮಾತನಾಡಿ, ಮಾ.11ರ ಸೋಮವಾರ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮತ ಎಣಿಕೆ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಾರಂಭವಾಗಲಿದೆ. ಒಂದು ವಾರ್ಡಿನ ಮತ ಎಣಿಕೆ ಮುಗಿದ ನಂತರ ಮತ್ತೊಂದು ವಾರ್ಡಿನ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ಬಹುತೇಕ ಬೆಳಿಗ್ಗೆ 10 ಗಂಟೆಗೆ ಪೂರ್ಣ ಫಲಿತಾಂಶ ಪ್ರಕಟವಾಗಲಿದೆ ಎಂದರು. ಮತ ಎಣಿಕೆ ಅಧಿಕಾರಿಗಳಾದ ಅಶೋಕ್, ಮಂಜುನಾಥ್ ಉಪಸ್ಥಿತರಿದ್ದರು.
ಜೆಡಿಎಸ್ ಗೆಲವು ಖಚಿತ
ಕಡೂರು: ರಾಜ್ಯ ಜೆಡಿಎಸ್ ವಕ್ತಾರ ವೈ.ಎಸ್.ವಿ. ದತ್ತರವರ ನೇತೃತ್ವದಲ್ಲಿ ಕಡೂರು ಪಟ್ಟಣದ ಪುರಸಭಾ ಚುನಾವಣೆ ಎದುರಿಸಿದ್ದು, ಕಡೂರು ಪಟ್ಟಣದ ನಾಗರಿಕರು ಮತ್ತೊಮ್ಮೆ ಜೆಡಿಎಸ್ ಅಭ್ಯರ್ಥಿಗಳನ್ನು ಆಶೀರ್ವದಿಸಲಿದ್ದಾರೆ ಎಂದು ಜಿಲ್ಲಾ ಯುವ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸನ್ನ ವಿಶ್ವಾಸ ವಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

