ಉತ್ತಮ ಆಡಳಿತ ನೀಡಿದ ಕಾರಣ ಬಿಜೆಪಿಗೆ 5 ಸ್ಥಾನ
ಕ.ಪ್ರ ವಾರ್ತೆ, ಮೂಡಿಗೆರೆ, ಮಾ.11
ಕಳೆದ ಬಾರಿ ನಡೆದ ಪ.ಪಂ ಚುನಾವಣೆಯಲ್ಲಿ 4 ಸ್ಥಾನಗಳನ್ನು ಪಡೆದ ಬಿಜೆಪಿ ಉತ್ತಮ ಆಡಳಿತ ನೀಡಿದ್ದರ ಪರಿಣಾಮ ಈ ಬಾರಿ 5 ಸ್ಥಾನಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿ ತಿಳಿಸಿದರು.
ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಶಿಲರಾದ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ಈ ಪಟ್ಟಣ ಪಂಚಾಯತ್ ಚುನಾವಣೆ ಮುಂದಿನ ವಿಧಾನಸಭಾ ಚುನಾವಣೆಯ ಮೆಟ್ಟಿಲು. ಗೆದ್ದೆವೆಂದು ಹಿಗ್ಗದೆ ಪಂಚಾಯತ್ ಅಭಿವೃದ್ಧಿ ಕೆಲಸದಲ್ಲಿ ತೊಡಗಿಕೊಳ್ಳುವಂತೆ ಅಭ್ಯರ್ಥಿಗಳಿಗೆ ಕಿವಿಮಾತು ಹೇಳಿದರು.
ಅರಣ್ಯ ವಸತಿ ಮತ್ತು ವಿಹಾರಧಾಮದ ಅಧ್ಯಕ್ಷ ಎಂ.ಕೆ. ಪ್ರಾಣೇಶ್ ಮಾತನಾಡಿ, ಪಟ್ಟಣ ಪಂಚಾಯತ್ ಸ್ಥಾನಕ್ಕೆ ಸ್ಪರ್ಧಿಸಿ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸಿದ ಪಕ್ಷದ ಕಾರ್ಯಕರ್ತರು, ಮತದಾರರನ್ನು ಅಭಿನಂದಿಸಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸುತ್ತದೆ. ತಾಲೂಕಿನಲ್ಲಿ ಉತ್ತಮ ಅಭಿವೃದ್ಧಿ ಕಾರ್ಯ ನಡೆದಿರುವುದೇ ಬಿಜೆಪಿ ಗೆಲುವಿಗೆ ಮುನ್ನುಡಿಯಾಗಿದೆ. ಪಪಂ ಚುನಾವಣೆಯಲ್ಲಿ ಸ್ಪರ್ಧಿಸಿ ಪರಾಭವಗೊಂಡಿರುವವರು ನಿರಾಶರಾಗದೆ ಗೆದ್ದವರಿಗೆ ಮಾರ್ಗದರ್ಶನ ಮಾಡುವಂತೆ ತಿಳಿಸಿದರು.
ತಾಪಂ ಅಧ್ಯಕ್ಷ ಎಂ.ಎ. ಶೇಷಗಿರಿ, ರಾಜ್ಯಕಾರ್ಯಕಾರಿ ಸಮಿತಿಯ ಎಂ.ಆರ್. ಜಗದೀಶ್, ತಾಲೂಕು ಅಧ್ಯಕ್ಷ ಡಿಎಸ್. ಸುರೇಂದ್ರ, ಎಚ್.ಬಿ. ಶಿವಣ್ಣ, ಬಿ.ಎನ್. ಜಯಂತ್ ಕುಮಾರ್, ವಿ.ಕೆ. ಶಿವೇಗೌಡ ಸೇರಿದಂತೆ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ಫಲಿತಾಂಶ ಬಿಜೆಪಿಗೆ ಎಚ್ಚರಿಕೆಯ ಗಂಟೆ: ಶಾಸಕ ವಿಶ್ವನಾಥ್
ಕಡೂರು: ಕಡೂರು ಹಾಗು ಬೀರೂರು ಪುರಸಭಾ ಚುನಾವಣೆಗಳಲ್ಲಿ ನಮ್ಮ ನಿರೀಕ್ಷೆಗೆ ತಕ್ಕಂತೆ ಬಿಜೆಪಿ ಅಭ್ಯರ್ಥಿಗಳಿಗೆ ಗೆಲವು ಸಿಗದಿದ್ದರೂ, 9 ಸ್ಥಾನಗಳಲ್ಲಿ ಸಮಾಧಾನಕರ ಫಲಿತಾಂಶ ದೊರೆತಿದ್ದು, ಇದರಿಂದ ಎಚ್ಚರಿಕೆಯ ಪಾಠ ಕಲಿಯಬೇಕಿದೆ ಎಂದು ಶಾಸಕ ಡಾ ವೈ.ಸಿ. ವಿಶ್ವನಾಥ್ ಹೇಳಿದರು.
ಅವರು ಕಡೂರು ಪಟ್ಟಣದ ತಮ್ಮ ಕಾರ್ಯಾಲಯದಲ್ಲಿ ಗೆಲವು ಸಾಧಿಸಿದ ಬಿಜೆಪಿ ಅಭ್ಯರ್ಥಿಗಳನ್ನು ಅಭಿನಂದಿಸಿ ಮಾತನಾಡಿ, ಕಳೆದ ಪುರಸಭಾ ಚುನಾವಣೆಯಲ್ಲಿ ಬೀರೂರು ಪುರಸಭೆಯಲ್ಲಿ 3 ಸ್ಥಾನ ಗಳಿಸಿದ್ದ ಬಿಜೆಪಿ ಈ ಬಾರಿ 9 ಸ್ಥಾನಗಳಲ್ಲಿ ಗೆಲವು ಸಾಧಿಸಿದೆ. ಕೇವಲ ಬಿಜೆಪಿ ನಾಮಕರಣ ಸದಸ್ಯರೇ ಇರುತ್ತಿದ್ದ ಕಡೂರು ಪುರಸಭೆಯಲ್ಲಿ ಬಿಜೆಪಿಯು ಯಾವುದೇ ಖಾತೆ ತೆರೆಯದೇ ಇದ್ದು ಈ ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವ ಮೂಲಕ ಖಾತೆ ತೆರೆಯುತ್ತಿರುವುದು ಸಮಾಧಾನಕರ ಅಂಶವಾಗಿದೆ ಎಂದರು.
ತಾಲೂಕು ಬಿಜೆಪಿ ಉಪಾಧ್ಯಕ್ಷ ಎ. ಮಣಿ ಮಾತನಾಡಿ, ನಮಗೆ ಜವಾಬ್ದಾರಿ ನೀಡಿದ್ದ ಮೂರು ವಾರ್ಡುಗಳಲ್ಲಿ ಶ್ರಮವಹಿಸಿ ಕೆಲಸ ಮಾಡಿದ್ದರಿಂದ 10 ನೇ ವಾರ್ಡಿನ ಅಭ್ಯರ್ಥಿ ರಾಜೇಶ್ ಗೆಲವು ಸಾಧಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ರಾಜೇಶ್ ಉತ್ತಮ ಆಡಳಿತ ನೀಡಬೇಕು ಎಂದರು.
ಬಿಜೆಪಿ ಮುಖಂಡ ಕೆ.ಎಚ್.ಎ. ಪ್ರಸನ್ನ, ಕೆ.ಟಿ. ಜಗನ್ನಾಥ್, ವೇಲು, ಸತೀಶ್, ಶೇಖರ್, ಸುರೇಶ್, ಆನಂದ್, ಕಣ್ಣ, ವೆಂಕಟೇಶ್, ಎ. ಕುಮಾರ್, ದೊರೆಸ್ವಾಮಿ, ಪ್ರಕಾಶ್, ಶರವಣ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

