ಚಿಕ್ಕಮಗಳೂರು

ಛಾಯಾಗ್ರಾಹಕರ ಸಂಘದ ಸಭೆ

Published On :

ನರಸಿಂಹರಾಜಪುರ: ಛಾಯಾಗ್ರಾಹಕರ ಸಂಘದ ಜಿಲ್ಲಾ ಸಮಿತಿಯ ಪ್ರಥಮ ಮಾಸಿಕ ಸಭೆ ಉಮಾ ಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
 ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಎ.ಎನ್. ಮೂರ್ತಿ ಸಭೆ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಛಾಯಾಗ್ರಾಹಕರ ಸಮಿತಿ ಅಸ್ತಿತ್ವಕ್ಕೆ ಬಂದಿರುವುದರಿಂದ ಮುಂದಿನ ದಿನಗಳಲ್ಲಿ ಛಾಯಾಗ್ರಾಹಕರ ಅಭಿವೃದ್ಧಿಗೆ ಅನುಕೂಲವಾಗಲಿದೆ. ಎಲ್ಲಾ ಛಾಯಾಗ್ರಾಹಕರು ತಮ್ಮ ಗುರುತಿನ ಚೀಟಿಯನ್ನು ಹೊಂದಿರಬೇಕು. ಸಂಘದ ನಿಬಂಧನೆಯನ್ನು ಪಾಲಿಸಬೇಕು ಎಂದು ಸಲಹೆ ನೀಡಿದರು.
ನರಸಿಂಹರಾಜಪುರ ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವಿಜು ಅಧ್ಯಕ್ಷತೆ ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಶ್ರೀಧರ, ಚಿಕ್ಕಮಗಳೂರು ಜಿಲ್ಲಾ ಛಾಯಾಗ್ರಾಹಕರ ಸಂಘದ ಉಪಾಧ್ಯಕ್ಷ ಜೋಯಿ, ಖಜಾಂಚಿ ರಾಜೇಶ್, ಜಿಲ್ಲಾ ಕಾರ್ಯದರ್ಶಿ ಸೋಮಶೇಖರ್, ನರಸಿಂಹರಾಜಪುರ ತಾಲೂಕು ಛಾಯಾಗ್ರಾಹಕರ ಸಂಘದ ಉಪಾಧ್ಯಕ್ಷ ದಯಾಕರ್ ಸುವರ್ಣ, ಗೌರವಾಧ್ಯಕ್ಷ ಬಾಲಚಂದ್ರ, ಶೃಂಗೇರಿ ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ವೇಲನ್, ಕೊಪ್ಪ ತಾಲೂಕು ಛಾಯಾಗ್ರಾಹಕರ ಸಂಘದ ಅಧ್ಯಕ್ಷ ದುರ್ಗೇಶ್, ಮೂಡಿಗೆರೆ ತಾ. ಛಾಯಾಗ್ರಾಹಕರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಚಿಕ್ಕಮಗಳೂರು ತಾ. ಸಂಘದ ಕಾರ್ಯದರ್ಶಿ ರೇಣುಕಪ್ಪ ಇದ್ದರು. ಚಿಕ್ಕಮಗಳೂರು ಜಿಲ್ಲೆಯ ವಿವಿಧ ತಾಲೂಕುಗಳ ಛಾಯಾಗ್ರಾಹಕರು ಸಭೆಯಲ್ಲಿ ಉಪಸ್ಥಿತರಿದ್ದರು.

ಮುಂದಿನ ಚುನಾವಣೆಗೆ ದಿಕ್ಸೂಚಿ: ಚಂದ್ರಪ್ಪ
ಮೂಡಿಗೆರೆ: ಪಟ್ಟಣ ಪಂಚಾಯಿತಿಯ 11 ವಾರ್ಡ್‌ಗಳಲ್ಲಿ 5ರಲ್ಲಿ ಕಾಂಗ್ರೆಸ್ ಹಾಗೂ ಒಂದರಲ್ಲಿ ಬೆಂಬಲಿತ ಅಭ್ಯರ್ಥಿ ಪಕ್ಷೇತರದಲ್ಲಿ ಗೆಲುವು ಸಾಧಿಸುವ ಮೂಲಕ 6 ಸ್ಥಾನಗಳನ್ನು ಕಾಂಗ್ರೆಸ್ ಮುಡಿಗೇರಿಸಿಕೊಂಡಿದ್ದು, ಇದು ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಬಿ.ಎನ್. ಚಂದ್ರಪ್ಪ ಅಭಿಪ್ರಾಯಪಟ್ಟರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಬಿಜೆಪಿ ಮೂರು ಭಾಗವಾಗಿ ಹೋಳಾಗಿದ್ದೆ ಅವರಿಗೆ ಮುಳುವಾಗಿದೆ. ರಾಜ್ಯ ಸರ್ಕಾರದ ಆಡಳಿತಾವಧಿಯಲ್ಲಿ ಅಪರೇಷನ್ ಕಮಲ ಎಂಬ ಹೆಸರಿನಲ್ಲಿ ಕಾಲ ಕಳೆದು ಮೂರು ಮುಖ್ಯಮಂತ್ರಿಗಳು ಅಧಿಕಾರದ ಗದ್ದುಗೆ ಏರಿ ಕುರ್ಚಿಯನ್ನು ಉಳಿಸಿಕೊಳ್ಳಲು ಹೋರಾಡಿದರೆ ವಿನಾ ಅಭಿವೃದ್ಧಿಯನ್ನು ಸಂಪೂರ್ಣ ಮರೆತರು. ಇವರ ಭ್ರಷ್ಟಾಚಾರ, ಒಳ ಜಗಳ, ಆಂತರಿಕ ಕಚ್ಚಾಟಗಳಿಂದ ಬೇಸತ್ತಿರುವ ಮತದಾರರು ಆಡಳಿತರೂಢಾ ಪಕ್ಷಕ್ಕೆ ಎಚ್ಚರಿಕೆ ನೀಡಿದ್ದಾರೆ ಎಂದರು.
ಜಿಲ್ಲೆಯ ನಗರ ಮತ್ತು ಪಟ್ಟಣ ಪಂಚಾಯಿತಿ ಅಭ್ಯರ್ಥಿಗಳಿಗೆ ಮತ ಹಾಕುವ ಮೂಲಕ ಕಾಂಗ್ರೆಸ್ ಗೆಲವಿಗೆ ಕಾರಣಕರ್ತರಾದ ಮತದಾರರು, ಕಾರ್ಯಕರ್ತರು, ಮುಖಂಡರನ್ನು ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಜಿ.ಎಚ್. ಹಾಲಪ್ಪಗೌಡ, ಗೋಪಾಲಗೌಡ ಸೇರಿದಂತೆ ಅನೇಕ ಮುಖಂಡರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.