ಸೇನಾಭರ್ತಿಗೆ ಅರ್ಜಿ ಆಹ್ವಾನ
ಶಿವಮೊಗ್ಗ: ಆರ್ಟಿಲರಿ ಸೆಂಟರ್ ನಾಸಿಕ್ ರೋಡ್ ಕ್ಯಾಂಪ್ನಲ್ಲಿ ಖಾಲಿ ಇರುವ ಸೈನಿಕ ಜನರಲ್ ಡ್ಯೂಟಿ ಮತ್ತು ಸೈನಿಕ ಟೆಕ್ನೀಷಿಯನ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಭರ್ತಿ ಮಾಡಲು ಏಪ್ರಿಲ್ 15ರಿಂದ 17ರವರೆಗೆ ನೇಮಕಾತಿ ರ್ಯಾಲಿ ನಡೆಯಲಿದೆ. ಈ ನೇಮಕಾತಿ ರ್ಯಾಲಿಯಲ್ಲಿ ಯುದ್ಧ ಸಂತ್ರಸ್ಥರ ಮಕ್ಕಳು, ಸೇವೆಯಲ್ಲಿರುವ ಸೈನಿಕರ ಮಕ್ಕಳು, ಮಾಜಿ ಸೈನಿಕರ ಮಕ್ಕಳು ಹಾಗೂ ಸೇವೆಯಲ್ಲಿರುವ ಸೈನಿಕರ ಸ್ವಂತ ಸಹೋದರರು ಪಾಲ್ಗೊಳ್ಳಬಹುದಾಗಿದೆ. ಜನರಲ್ ಡ್ಯೂಟಿ ಹುದ್ದೆಗೆ ಮೆಟ್ರಿಕ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹಾಗೂ ಕ್ರೀಡಾ ಅಭ್ಯರ್ಥಿಗಳು ಮತ್ತು ಸೈನಿಕ ಟೆಕ್ನೀಷಿಯನ್ ಹುದ್ದೆಗೆ ಪಿಯುಸಿ ಅಥವಾ ಇಂಟರ್ ಮಿಡಿಯಟ್ ತೇರ್ಗಡೆಯಾಗಿದ್ದು, ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಇಂಗ್ಲಿಷ್ ವಿಷಯದಲ್ಲಿ ವಿದ್ಯಾಬ್ಯಾಸ ಮಾಡಿದವರಾಗಿರಬೇಕು. ನೇಮಕಾತಿಯಲ್ಲಿ ಭಾಗವಹಿಸಲಿಚ್ಚಿಸುವವರು ದೂ-08182 220925ನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಇಂದು ಜಿಲ್ಲಾ ಮಟ್ಟದ ಕೋಳಿ ಕಾಳಗ
ತರೀಕೆರೆ: ವಾಯುಪುತ್ರ ಯುವಕರ ಸಂಘ ವತಿಯಿಂದ ಮಾ.13ರಂದು ಬೆಳಗ್ಗೆ 10 ಗಂಟೆಗೆ ಪಟ್ಟಣದ ಶ್ರೀ ರೇವಣಸಿದ್ದೇಶ್ವರ ವೃತ್ತದಲ್ಲಿ ಗ್ರಾಮೀಣ ಕ್ರೀಡೆಗಳಲ್ಲಿ ಒಂದಾದ ಜಿಲ್ಲಾ ಮಟ್ಟದ ಬರಿ ಕಾಲಿನ ಕೋಳಿ ಕಾಳಗ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ- 9663625110, 9535445125 ಸಂಪರ್ಕಿಸಬಹುದು.
15ರಂದು ದತ್ತಿ ಉಪನ್ಯಾಸ
ಶೃಂಗೇರಿ: ಕನ್ನಡ ಸಾಹಿತ್ಯ ಪರಿಷತ್ ಕಸಬಾ ಹೋಬಳಿ ಘಟಕದಿಂದ 15 ರಂದು ತಾಲೂಕಿನ ಮೆಣಸೆ ಪಂಚಾಯಿತಿ ಮಸಿಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಸಾಂಸ್ಕೃತಿಕ ಸ್ಪರ್ದಾ ಕಾರ್ಯಕ್ರಮ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಭಾವಗೀತೆ ಮತ್ತು ಜಾನಪದ ಗೀತೆ ಸ್ಪರ್ದೆ ನಡೆಯಲಿದೆ. ಕುವೆಂಪು ರಾಮಾಯಣ ದರ್ಶನಂ ಕುರಿತು ಸುಧೀರ್ ಕುಮಾರ್ ಮುರೋಳಿ ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಮತದಾರರಿಗೆ ಕೃತಜ್ಞತೆ
ತರೀಕೆರೆ: ಸ್ಥಳೀಯ ಪುರಸಭಾ ಸದಸ್ಯರ ಚುನಾವಣೆಯ 11ನೇ ವಾರ್ಡ್ನಲ್ಲಿ ಪುರಸಭಾ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಸ್ಪರ್ಧಿಸಿದ್ದ ತನಗೆ ಮತ ನೀಡಿ ಸಹಕರಿಸಿದ ವಾರ್ಡ್ನ ಎಲ್ಲಾ ಮತದಾರರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕೃತಜ್ಞತೆ ಅರ್ಪಿಸುತ್ತಿರುವುದಾಗಿ ಬಿಜೆಪಿ ಅಭ್ಯರ್ಥಿ ಟಿ.ಎಸ್.ಚಂದ್ರಶೇಖರ್ ತಿಳಿಸಿದ್ದಾರೆ.
18ರಂದು ಕೃಷಿ ಕಾರ್ಮಿಕರ ಸಮಾವೇಶ
ಶಿವಮೊಗ್ಗ: ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮಾ.18ರಂದು ನವದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಮಟ್ಟದ ರಾಷ್ಟ್ರೀಯ ರೈತರ ಮತ್ತು ಕೃಷಿ ಕಾರ್ಮಿಕರ ಸಮಾವೇಶ ಹಮ್ಮಿಕೊಂಡಿದೆ. ನರ್ಮದಾ ಬಚಾವೋ ಅಂದೋಲನ, ಭಾರತೀಯ ಕಿಸಾನ್ ಯೂನಿಯನ್ ಸೇರಿದಂತೆ ದೇಶದ ವಿವಿಧ ರೈತ ಸಂಘಟನೆಗಳೊಂದಿಗೆ ಸಮಾವೇಶ ಆಯೋಜಿಸಲಾಗಿದೆ. ಇದೇ ವೇಳೆ ರೈತರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಲಾಗುವುದು.
ಅಂಗವಿಕಲ ಕ್ರೀಡಾಕೂಟಕ್ಕೆ ಆಯ್ಕೆ
ಶಿವಮೊಗ್ಗ: 14ರಿಂದ 16ರವರೆಗೆ ಬಳ್ಳಾರಿ ಜಿಲ್ಲೆ ತೋರಣಗಲ್ನ ಜಿಂದಾಲ್ ಆದರ್ಶ ವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಸ್ಪೆಷಲ್ ಒಲಂಪಿಕ್ಸ್ನ ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಜಿಲ್ಲೆಯ 40 ವಿಕಲಚೇತನ ಮಕ್ಕಳು ಆಯ್ಕೆಯಾಗಿದ್ದಾರೆ ಎಂದು ಸ್ಪೆಷಲ್ ಒಲಂಪಿಕ್ನ ಜಿಲ್ಲಾ ಸಂಯೋಜಕ ಪ್ರದೀಪ ಕುಮಾರ್ ಎಲ್.ಎಸ್. ತಿಳಿಸಿದ್ದಾರೆ. ಇತ್ತೀಚೆಗೆ ಜಿಲ್ಲಾ ಮಟ್ಟದಲ್ಲಿ ನಡೆದ ಸ್ಪೆಷಲ್ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಒಟ್ಟು 270 ಅಂಗವಿಕಲ ಮಕ್ಕಳಲ್ಲಿ ಅರ್ಹರಾದ 40ಮಕ್ಕಳನ್ನು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗಿದೆ ಎಂದವರು ತಿಳಿಸಿದ್ದಾರೆ.
17ರಂದು ಮಾಜಿ ಸೈನಿಕರ ಸಭೆ
ಶಿವಮೊಗ್ಗ: ಇಸಿಎಚ್ಎಸ್ ಪಾಲಿಕ್ಲಿನಿಕ್ ಶಿವಮೊಗ್ಗ ಘಟಕ ಹಾಗೂ ಮಲೆನಾಡು ಮಾಜಿ ಸೈನಿಕರ ಸಂಘದ ಆಶ್ರಯದಲ್ಲಿ 17ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗದ ಇಸಿಎಚ್ಎಸ್ ಪಾಲಿಕ್ಲಿನಿಕ್ ಆವರಣದಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ಮಾಜಿ ಸೈನಿಕರ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ಪಾಲಿಕ್ಲಿನಿಕ್ನ ನಿಯಮಾವಳಿಗಳ ಬಗ್ಗೆ ಅರಿವು, ವೈದ್ಯಕೀಯ ಸೌಲಭ್ಯಗಳು ಹಾಗೂ ಮಾಜಿ ಸೈನಿಕರ ವೈದ್ಯಕೀಯ ಸವಲತ್ತುಗಳಲ್ಲಿನ ಕುಂದುಕೊರತೆಗಳ ಬಗ್ಗೆ ಚರ್ಚಿಸಲಾಗುವುದು. ಮಾಜಿ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕಾರ್ಯನಿರ್ವಾಹಕ ಅಧಿಕಾರಿ ನಿವೃತ್ತ ಕರ್ನಲ್ ಕೆ.ಎ. ರಾಮಚಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಾಹಿತಿಗಾಗಿ ದೂ-08182 220794.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

