ಅಭಿವೃದ್ಧಿಗೆ ಜೆಡಿಎಸ್ ಸಹಕಾರ
ಕಡೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪಿಗೆ ಜೆಡಿಎಸ್ ತಲೆಬಾಗಿದ್ದು, ಪುರಸಭೆಯಲ್ಲಿ ಅಧಿಕಾರ ನಡೆಸುವ ಪಕ್ಷದ ಉತ್ತಮ ನಿರ್ಧಾರಗಳಿಗೆ ಕೈ ಜೋಡಿಸುವ ಮೂಲಕ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಜೆಡಿಎಸ್ ಸಹಕಾರ ನೀಡಲಿದೆ ಎಂದು ಜೆಡಿಎಸ್ ನಗರ ಘಟಕದ ಕಾರ್ಯಾಧ್ಯಕ್ಷ ಭಂಡಾರಿ ಶ್ರೀನಿವಾಸ್ ಹೇಳಿದ್ದಾರೆ.
ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಳೆದ ಅವಧಿಯಲ್ಲಿ ಕಡೂರು ಪಟ್ಟಣದಲ್ಲಿ ಸುಮಾರು ರು. 15 ಕೋಟಿಗೂ ಹೆಚ್ಚು ಅನುದಾನದಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ, ವಿದ್ಯುದ್ದೀಪ, ನೈರ್ಮ್ಯಲೀಕರಣ ಸೇರಿದಂತೆ ವಿವಿಧ ಅಭಿವೃದ್ಧಿ ಕೈಕೊಂಡಿತ್ತು. ಆದರೆ ಮತದಾರರು ಪುರಸಭಾ ಚುನಾವಣೆಯಲ್ಲಿ ಬದಲಾವಣೆ ಬಯಸುವ ಮೂಲಕ ಹೊಸ ಮುಖಗಳಿಗೆ ಅವಕಾಶ ನೀಡಿದ್ದಾರೆ ಎಂದರು.
15 ವರ್ಷಗಳಲ್ಲಿ ಆಗದಿರುವಷ್ಟು ಅಭಿವೃದ್ಧಿಯನ್ನು ಕೇವಲ 5 ವರ್ಷದ ಜೆಡಿಎಸ್ ಅವಧಿಯಲ್ಲಿ ಮಾಡಲಾಗಿದೆ. ಜೆಡಿಎಸ್ ಪುರಸಭಾ ಸದಸ್ಯರು ಎಲ್ಲಾ ವಾರ್ಡುಗಳಲ್ಲಿಯೂ ಉತ್ತಮ ರೀತಿಯಲ್ಲಿ ಕೆಲಸ ಮಾಡಿರುವುದು ಜನರ ಕಣ್ಣ ಮುಂದೆ ಇದೆ. ಉತ್ತಮ ರಸ್ತೆ, ಚರಂಡಿ, ಬರಗಾಲದಿಂದ ಕುಡಿಯುವ ನೀರಿನ ತೀವ್ರ ಕೊರತೆ ಉಂಟಾದಾಗ ತಕ್ಷಣವೇ ಸ್ಪಂದಿಸುವ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಹಾಗು ಹೊಸ ಬಡಾವಣೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

