ಚಿಕ್ಕಮಗಳೂರು

ಗ್ರಾಮೀಣ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ

Published On :

ಚಿಕ್ಕಮಗಳೂರು: ಗ್ರಾಮೀಣ ಕ್ರೀಡೆಗಳು ನಶಿಸುತ್ತಿದ್ದು ಅವುಗಳನ್ನು ಬೆಳೆಸುವ ಪ್ರಾಮಾಣಿಕ ಪ್ರಯತ್ನವನ್ನು ನಾವೆಲ್ಲರೂ ಮಾಡಬೇಕಿದೆ ಎಂದು ಸಮಾಜ ಸೇವಕ ಶಿವರಾಜ್ ಹೇಳಿದ್ದಾರೆ. ಅತ್ತಿಗಿರಿಯ ಗಿರೀಶ್ ಅಭಿಮಾನಿ ಬಳಗ ಇತ್ತೀಚೆಗೆ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಗಳಲ್ಲಿ ಸೋಲು ಗೆಲುವು ಎನ್ನುವುದು ನಾಣ್ಯದ ಎರಡು ಮುಖಗಳಿದ್ದಂತೆ. ಗೆದ್ದವರು ಬೀಗದೆ ಸೋತವರು ನಿರಾಶರಾಗದೆ ಮುಂದಿನ ದಿನಗಳಲ್ಲಿ ತಂಡವು ಸಾಂಘಿಕ ಹೋರಾಟ ನಡೆಸಿದಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದರು.
ತೊಗರಿಹಂಕಲ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ವಿ. ದೇವರಾಜ್ ಮಾತನಾಡಿ, ಕ್ರೀಡಾಪಟುಗಳು ಶಿಸ್ತು, ಸಂಯಮ ಒಳ್ಳೆಯ ನಡತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಫೈನಲ್ ಸೆಣಸಾಟದಲ್ಲಿ ವಿಜೇತ ಹೊಸಳ್ಳಿಪೇಟೆ ತಂಡಕ್ಕೆ 5 ಸಾವಿರ ನಗದು ಟ್ರೋಫಿ, ಸೂಪರ್ ಸ್ಟಾರ್ ತಂಡಕ್ಕೆ ದ್ವಿತೀಯ ಬಹುಮಾನ 3 ಸಾವಿರ ನಗದು ಟ್ರೋಫಿಯನ್ನು ಸುದರ್ಶನ್ ವಿತರಿಸಿದರು.
ಗಿರೀಶ್ ಅಭಿಮಾನಿ ಬಳಗದ ಅಧ್ಯಕ್ಷ ಅನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಲೋಕೇಶ್, ತೊಗರಿಹಂಕಲ್ ಪವಿತ್ರ, ಸದಸ್ಯರಾದ ಅನ್ನಪೂರ್ಣ ಸುರೇಶ್, ಕುಮಾರ್, ಚೌಡೇಶ್ವರಿ ಸೇವಾ ಸಮಿತಿಯ ಮುರುಗೇಶ್ ಪೂಜಾರಿ, ಸಂಜೀವ ಪೂಜಾರಿ, ರಮೇಶ್, ಗೋಪಾಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.