ಶವಗಾರದ ಶೀತಲೀಕರಣ ಘಟಕ ನಿಷ್ಕ್ರಿಯ: ಪ್ರತಿಭಟನೆ
ಚಿಕ್ಕಮಗಳೂರು: ಜಿಲ್ಲಾ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಶವಗಾರದ ಶೀತಲೀಕರಣ ಘಟಕ ನಿಷ್ಕ್ರಿಯಗೊಂಡಿರುವುದನ್ನು ಖಂಡಿಸಿ ವಿವಿಧ ರಾಜಕೀಯ ಪಕ್ಷಗಳ ಹಾಗೂ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.
ಕಳೆದ ಒಂದು ವಾರದ ಹಿಂದೆ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಎರಡು ಅನಾಥ ಶವಗಳು ಪತ್ತೆಯಾಗಿದೆ. ಅವುಗಳನ್ನು ಜಿಲ್ಲಾ ಶವಗಾರದ ಶೀತಲೀಕರಣ ಘಟಕದಲ್ಲಿ ಇಡಲಾಗಿತ್ತು.
ಬುಧವಾರ ಬೆಳಿಗ್ಗೆ ಅವುಗಳನ್ನು ಮರಣೋತ್ತರ ಪರೀಕ್ಷೆ ಮಾಡಲು ಹೊರ ತೆಗೆದಾಗ ಮೃತ ದೇಹಗಳಲ್ಲಿ ಹುಳುಗಳು ಕಾಣಿಸಿಕೊಂಡಿವೆ.
ದುರಸ್ತಿಗೆ ನಿರ್ಲಕ್ಷ್ಯ: ಇಲ್ಲಿನ ಶೀತಲೀಕರಣ ಘಟಕ ನಿಷ್ಕ್ರೀಯಗೊಂಡು ಸುಮಾರು ಒಂದೂವರೆ ತಿಂಗಳು ಕಳೆದರೂ ಕೂಡ ಅದನ್ನು ದುರಸ್ತಿ ಪಡಿಸುವಲ್ಲಿ ಆಸ್ಪತ್ರೆಯ ಆಡಳಿತ ವರ್ಗ ನಿರ್ಲಕ್ಷ್ಯ ತೋರಿದೆ. ಜತೆಗೆ ಸರ್ಕಾರವೂ ಸ್ಪಂದಿಸಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕೂಡಲೇ ಶೀತಲೀಕರಣ ಘಟಕ ದುರಸ್ತಿಗೊಳಿಸುವಂತೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಎಸ್ಪಿ ಜಿಲ್ಲಾಧ್ಯಕ್ಷ ಕೆ.ಟಿ. ರಾಧಾಕೃಷ್ಣ, ಸಿಪಿಐನ ಬಿ. ಅಮ್ಜದ್, ದಸಂಸದ ಈಶ್ವರ್ ಹಾಗೂ ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

