ಚಿಕ್ಕಮಗಳೂರು

ಇಓ ವರ್ಗಾವಣೆಗೆ ಶಿಫಾರಸ್ಸು

Published On :

ಕ.ಪ್ರ ವಾರ್ತೆ, ಚಿಕ್ಕಮಗಳೂರು, ಮಾ. 13
ಕಡೂರು ತಾಲೂಕು ಪಂಚಾಯ್ತಿಯ ಕಾರ್ಯನಿರ್ವಹಕ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ರೇಖಾ ಹುಲಿಯಪ್ಪಗೌಡ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಈ ತೀರ್ಮಾನವನ್ನು ಕೈಗೊಳ್ಳಲಾಯಿತು.
ಕಡೂರು ತಾಲೂಕಿನ ಬಾಣೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಈ ಸಂಬಂಧ ಕಳೆದ 10 ದಿನಗಳಿಂದ ಬಾಣೂರು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಕ್ಕೆ ಪ್ರಯತ್ನಿಸಿದರೂ ಸಿಗುತ್ತಿಲ್ಲ. ಅಧಿಕಾರಿಗಳನ್ನು ಹಿಡಿತದಲ್ಲಿಡಲು ಕಾರ್ಯನಿರ್ವಹಕ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಜಿಪಂ ಸದಸ್ಯ ಕಲ್ಮರಡಪ್ಪ ಆರೋಪಿಸಿದರು.
ಕಡೂರು ತಾಲೂಕಿನ ಮಲ್ಲೇಶ್ವರದಲ್ಲಿ ಇತ್ತೀಚೆಗೆ ಗ್ರಾಮ ಪಂಚಾಯ್ತಿಗೆ ಅಲ್ಲಿನ ಜನರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಇಓ ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಜಿಪಂ ಉಪಾಧ್ಯಕ್ಷೆ ಮಾಲಿನಿಬಾಯಿ ಸಭೆಯ ಗಮನಕ್ಕೆ ತಂದರು. ಉಪಾಧ್ಯಕ್ಷರೇ ಆರೋಪ ಮಾಡುತ್ತಿದ್ದಾರೆ ಎಂದಾದರೆ ಇತರೆ ಕ್ಷೇತ್ರಗಳಲ್ಲಿ ಸಮಸ್ಯೆ ಎಷ್ಟು ಗಂಭೀರವಾಗಿರಬಹುದು. ಅಧಿಕಾರಿಗಳು ಯಾವ ಮಟ್ಟದಲ್ಲಿ ಕೆಲಸ ಮಾಡುತ್ತಿದ್ದಾರೆಂದು ಇದರಲ್ಲಿ ತಿಳಿಯುತ್ತದೆ ಎಂದು ಸದಸ್ಯರಾದ ಅನಂತು, ಸವಿತಾ ರಮೇಶ್ ಹೇಳಿದರು.
ಜನಪ್ರತಿನಿಧಿಗಳಿಗೆ ಸಂರ್ಪಕಕ್ಕೆ ಸಿಗದ ಕಡೂರು ತಾಪಂ ಕಾರ್ಯನಿರ್ವಹಕ ಅಧಿಕಾರಿಯನ್ನು ವರ್ಗಾವಣೆ ಮಾಡಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಪಂ ಅಧ್ಯಕ್ಷರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.