ಚಿಕ್ಕಮಗಳೂರು

ಪಡಿತರ ಅಕ್ಕಿ ಅಕ್ರಮ ಸಾಗಾಣೆ; ವಶ

Published On :

ಕೊಪ್ಪ: ಲಾರಿಯೊಂದರಲ್ಲಿ ಪಡಿತರ ಅಕ್ಕಿಯನ್ನು ಮಂಗಳೂರಿಗೆ ಅಕ್ರಮವಾಗಿ ಸಾಗಾಣೆ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಆಧಾರದ ಮೇಲೆ ಕೊಪ್ಪ ಪೊಲೀಸರು ಅಕ್ಕಿ ತುಂಬಿದ ಲಾರಿಯನ್ನು ವಶಪಡಿಸಿಕೊಂಡಿದ್ದಾರೆ.
ಪಟ್ಟಣ ಖಾಸಗಿ ಗೋದಾಮಿನಿಂದ 50 ಕೆ.ಜಿ. ತೂಕದ 129 ಅಕ್ಕಿ ಚೀಲಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಲಾರಿ ಮಾಲೀಕ ಮಂಜುನಾಥ ಮತ್ತು ಚಾಲಕ ಪ್ರಕಾಶ್ ಅವರ ಮೇಲೆ ಅಗತ್ಯ ವಸ್ತುಗಳ ದುರ್ಬಳಕೆ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.
ನ್ಯಾಯಾಂಗ ವಶಕ್ಕೆ ಲಾರಿಯನ್ನು ನೀಡಿದ ನಂತರ ತಹಸೀಲ್ದಾರ್ ಅವರು ಇದು ಪಡಿತರ ಅಕ್ಕಿಯಲ್ಲ. ಖಾಸಗಿ ಮಿಲ್ ಅಕ್ಕಿ ಎಂದು ವರದಿ ನೀಡಿದ್ದು, ಈ ಪ್ರಕರಣವನ್ನು ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ಪಿ ಎಸ್‌ಐ ಗವಿರಾಜ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.