ರಸ್ತೆ ಅಗಲೀಕರಣ: ಪ್ರತಿಭಟನೆ
ಮೂಡಿಗೆರೆ: ಪಟ್ಟಣದ ಕಡೂರು- ಮಂಗಳೂರು ರಸ್ತೆ ಅಗಲೀಕರಣ ಮಾಡುವಂತೆ ಒತ್ತಾಯಿಸಿದರೂ ಕೆಲವು ರಾಜಕಾರಣಿಗಳು ಹಾಗೂ ಅಧಿಕಾರಿಗಳು ನಾಟಕವಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ರಸ್ತೆ ಅಗಲೀಕರಣ ತಕ್ಷಣ ಪ್ರಾರಂಭಿಸದಿದ್ದಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಎಸ್ಆರ್ ಪಕ್ಷದ ಕ್ಷೇತ್ರಾಧ್ಯಕ್ಷ ಎಸ್.ಪಿ. ರಾಜು ಒತ್ತಾಯಿಸಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಕಳೆದ 4 ತಿಂಗಳ ಹಿಂದೆ ಶಾಸಕರ ನೇತೃತ್ವದಲ್ಲಿ ತುರ್ತು ಸಭೆ ಕರೆದು ರಸ್ತೆ ಮಧ್ಯ ಭಾಗದಿಂದ 45- 45- 90 ಅಡಿ ಅಗಲೀಕರಣ ಮಾಡಲು ನಿರ್ಧರಿಸಲಾಯಿತು. ಅದರಂತೆ ಪ್ರವಾಸಿ ಮಂದಿರದ ಕಾಪೌಂಡ್ ಗೋಡೆ ಒಡೆಯುವುದರ ಮೂಲಕ ರಸ್ತೆ ಅಗಲೀಕರಣಕ್ಕೆ ಚಾಲನೆ ನೀಡಿದರು. ಒಬ್ಬರ ಮೇಲೊಬ್ಬರು ದೂರು ಹಾಕುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಆರೋಪಿಸಿದರು.
ಈಗ ಪಪಂ ಚುನಾವಣೆ ಮುಗಿದಿದ್ದು ಇನ್ನಾದರೂ ರಸ್ತೆ ಅಗಲೀಕರಣ ಮಾಡಲು ಮೀನಮೇಷ ಮಾಡಿದ್ದಲ್ಲಿ ಪಕ್ಷದಿಂದ ಸಾರ್ವಜನಿಕರ ನೇತೃತ್ವದಲ್ಲಿ ಉಗ್ರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ನಾಚಪ್ಪ, ಜಯಪಾಲ್, ಅರಸ್, ಮೇಘನಾಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

