ಚಿಕ್ಕಮಗಳೂರು

ಧೈರ್ಯವಿದ್ದರೆ ಗೋರಖ್ ಸಿಂಗ್ ವರದಿ ತಿರಸ್ಕರಿಸಿ

Published On :

ಕ.ಪ್ರ ವಾರ್ತೆ, ಶೃಂಗೇರಿ, ಮಾ.14
ಗೋರಖ್ ಸಿಂಗ್ ವರದಿ ಜಾರಿಯಲ್ಲಿದ್ದರೂ ರಾಷ್ಟ್ರೀಕೃತ ಬ್ಯಾಂಕುಗಳು, ಸಹಕಾರಿ ಬ್ಯಾಂಕುಗಳು ರೈತರ ಮೇಲೆ ಮೊಕದ್ದಮೆ ದಾಖಲಿಸಿ ಬಲವಂತದ ಸಾಲ ವಸೂಲಿ ನಡೆಸುತ್ತಿದೆ.
ಧೈರ್ಯವಿದ್ದರೆ ಗೋರಕ್ ಸಿಂಗ್ ವರದಿ ಸಂಪೂರ್ಣವಾಗಿ ತಿರಸ್ಕರಿಸಿ ಬಲವಂತದ ಸಾಲ ವಸೂಲಿಗೆ ಮುಂದಾಗಲಿ ಆಗ ತಕ್ಕ ಉತ್ತರ ನೀಡುತ್ತೇವೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಚ್.ಟಿ. ರಾಜೇಂದ್ರ ಬ್ಯಾಂಕುಗಳಿಗೆ ಸವಾಲು ಹಾಕಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿ, ತಾಲೂಕಿನ ಕುಂಚೇಬೈಲಿನಲ್ಲಿ ಕೊಪ್ಪದ ಸಿಂಡಿಕೇಟ್‌ಬ್ಯಾಂಕ್ ನವರು ರೈತ ಮುಖಂಡರೊಬ್ಬರ ಮನೆಗೆ ನುಗ್ಗಿ ಬಲವಂತವಾಗಿ ಅವರನ್ನು ಪೊಲೀಸ್ ಸಹಾಯದಿಂದ ಬಂಧಿಸಲು ಪ್ರಯತ್ನಿಸಿ ಅವರನ್ನು ಓಡಿಸಿರುವ ಕೃತ್ಯವನ್ನು ಖಂಡಿಸಿದರು.
ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಚಿಕೆಗೇಡಿನ ಸಂಗತಿ. ಪೊಲೀಸರು ಮಾನವೀಯತೆಯಿಂದ ವರ್ತಿಸಲಿ ಎಂದು ಎಚ್ಚರಿಸಿದರು.
ಗೋರಖ್ ಸಿಂಗ್ ವರದಿಯಲ್ಲಿಯೇ ತಿಳಿಸಿದಂತೆ ಹಳದಿ ಎಲೆ ರೋಗ, ಬೆಲೆ ಕುಸಿತ, ಆರ್ಥಿಕ ಸಂಕಷ್ಟದಿಂದ ರೈತರ ಸಾಲ ಮನ್ನಾ ಮಾಡಬೇಕು. ಬ್ಯಾಂಕುಗಳು ಇಂತಹ ಬಲವಂತದ ಕ್ರಮಕ್ಕೆ ಹೆದರಿ ರೈತರು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ಬ್ಯಾಂಕುಗಳೇ ಹೊಣೆಯಾಗುತ್ತದೆ ಎಂದರು.
ತಾಲೂಕು ಘಟಕದ ಅಧ್ಯಕ್ಷ ಜಿ.ಜಿ. ಮಂಜುನಾಥ್, ರಮೇಶ್, ವಿವೇಕನಂದ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.