ಚಿಕ್ಕಮಗಳೂರು

ಮಹಿಳೆ ಮೇಲಿನ ಶೋಷಣೆ ನಿಲ್ಲಲಿ: ಅನುರಾಧಾ

Published On :

ಕ.ಪ್ರ ವಾರ್ತೆ, ತರೀಕೆರೆ, ಮಾ.14
ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆ ತಪ್ಪಬೇಕು ಎಂದು ತರೀಕೆರೆ ಉಪವಿಭಾಗಾಧಿಕಾರಿ ಜಿ. ಅನುರಾಧಾ ತಿಳಿಸಿದ್ದಾರೆ.
ಅವರು, ಗುರುವಾರ ಮಮತ ಮಹಿಳಾ ಸಮಾಜ ವತಿಯಿಂದ ಸಮಾಜದ ಆವರಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ರಕ್ತಪರೀಕ್ಷೆ, ರಕ್ತದಾನ ಶಿಬಿರ, ನೇತ್ರದಾನ ನೋಂದಣಿ ಶಿಬಿರ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಿದ್ದರು.
ಪರ್ಯಾಯ ಇಲ್ಲ: ತಾಲೂಕು ವೈದ್ಯಾಧಿಕಾರಿ ಡಾ. ಗಣೇಶ್ ಮಾತನಾಡಿ, ಮಹಿಳಾ ಹೋರಾಟದ ಸವಿನೆನಪಿಗಾಗಿ ಈ ಕಾರ್ಯಕ್ರಮ ನಡೆಯುತ್ತಿದೆ, ಇದೊಂದು ವೈಶಿಷ್ಟ್ಯಪೂರ್ಣವಾಗಿದೆ. ರಕ್ತಕ್ಕೆ ಪರ್ಯಾಯ ವ್ಯವಸ್ಥೆ ಇಲ್ಲ. ಶಿವಮೊಗ್ಗ ರಕ್ತ ನಿಧಿಯಿಂದ ತರೀಕೆರೆ ಸಾರ್ವಜನಿಕ ಆಸ್ಪತ್ರೆಗೆ ರಕ್ತವನ್ನು ನೀಡಲಾಕುತ್ತಿದೆ ಎಂದು ತಿಳಿಸಿದರು.
ವಯಸ್ಸಿನ ಅಂತರವಿಲ್ಲ: ಸಾರ್ವಜನಿಕರ ಆಸ್ಪತ್ರೆಯ ನೇತ್ರ ಸಿಬ್ಬಂದಿ ಜೈಶಂಕರ್ ಮಾತನಾಡಿ, ನೇತ್ರದಾನಕ್ಕೆ ವಯಸ್ಸಿನ ಅಂತರವಿಲ್ಲ. ಜೀವಹೋಗಿ ಆರು ಗಂಟೆಯೊಳಗಾಗಿ ನೇತ್ರದಾನ ಸ್ವೀಕರಿಸಿರಬೇಕು. ನೇತ್ರದಾನದ ಬಗ್ಗೆ ಜನರಲ್ಲಿ ಹೆಚ್ಚು ಅರಿವು ಮೂಡಿಸಬೇಕು ಎಂದರು.
ಸಮಾಜದ ಅಧ್ಯಕ್ಷೆ ಸೌಭಾಗ್ಯಮ್ಮ ಶ್ರೀರಂಗಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮಾಜದ ಸದಸ್ಯೆಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.