ಚಿಕ್ಕಮಗಳೂರು

ಸತ್ಯನಾರಾಯಣಗೆ ಪಿಎಚ್.ಡಿ

Published On :

ಚಿಕ್ಕಮಗಳೂರು: ನಗರದ ಎಐಟಿ ಕಾಲೇಜಿನ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಅಸೋಸಿಯೇಟ್ ಪ್ರೊಪೆಸರ್ ಆಗಿ ಕಳೆದ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಜಿ.ಎಂ. ಸತ್ಯನಾರಾಯಣ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ ಲಭಿಸಿದೆ. ಪ್ರೊಫೆಸರ್ ರೀ ಎಂಜಿನಿಯರಿಂಗ್ ಟೂ ಎನಾನ್ಸ್ ಪ್ರೋಡಕ್ಟಿವಿಟಿ ಇನ್ ಸರ್ವೀಸ್ ಸೆಕ್ಟರ್ ಬೈ ಆಪ್ಲಿಕೇಷನ್ ಆಫ್ ಡಾಟಾ ಎನ್ಪಲ್ಯ್ಮೆಂಟ್ ಅನಾಲಿಸಿಸ್ ಎಂಬ ವಿಷಯದಲ್ಲಿ ಮಂಡಿಸಿದ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ಲಭಿಸಿದೆ. ಏಪ್ರಿಲ್‌ನಲ್ಲಿ ವಿಟಿಯು ಬೆಳಗಾಂನಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು.
ಶವ ಪತ್ತೆ
ಮೂಡಿಗೆರೆ: ತಾಲೂಕಿನ ಬಣಕಲ್ ಠಾಣಾ ವ್ಯಾಪ್ತಿಯ ಹೊರಟ್ಟಿ ಗದ್ದೆ ಸಮೀಪದ ಮರವೊಂದರಲ್ಲಿ ಗುರುವಾರ ಸಂಜೆ ಕೊಳೆತ ಅಪರಿಚಿತ ಶವವೊಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬಣಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.