ಚಿಕ್ಕಮಗಳೂರು

ಸ್ಪಷ್ಟ ಗುರಿ ಇದ್ದರೆ ಉತ್ತಮ ಭವಿಷ್ಯ

Published On :

ಕ.ಪ್ರ ವಾರ್ತೆ, ಕಡೂರು, ಮಾ. 14
ದೇಶದ ಮುಂದಿನ ರೂವಾರಿಗಳಾಗಿರುವ ಯುವ ಸಮೂಹವು ಆತ್ಮ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸಿ ಸ್ಪಷ್ಟ ಗುರಿಯಿಟ್ಟುಕೊಂಡಲ್ಲಿ ಉತ್ತಮ ಭವಿಷ್ಯ ಕಂಡುಕೊಳ್ಳಲು ಸಾಧ್ಯ ಎಂದು ಶಾಸಕ ಡಾ. ವೈ.ಸಿ. ವಿಶ್ವನಾಥ್ ಹೇಳಿದರು.
ತಾಲೂಕು ಹಿರೇನಲ್ಲೂರು ಗ್ರಾಮದಲ್ಲಿ ಕಡೂರು ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ಸಹಭಾಗಿತ್ವದಲ್ಲಿ ಆರಂಭಿಸಲಾದ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಶ್ರಮದಾನ, ವ್ಯಕ್ತಿತ್ತ ವಿಕಾಸ, ಪರಿಸರ ಸಂರಕ್ಷಣೆ ಹಾಗೂ ಸ್ವಚ್ಛತೆಯ ಬಗ್ಗೆ ವಿದ್ಯಾರ್ಥಿಗಳು ಸಾರ್ವಜನಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಸಾರ್ವಜನಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕು. ವಿದ್ಯಾರ್ಥಿ ದಿಸೆಯಲ್ಲಿಯೇ ಸೇವೆಮಾಡುವ ಕುರಿತು ಚಿಂತನೆ ನಡೆಸಿ ಸಮರ್ಪಣಾ ಮನೋಭಾವದಿಂದ ಸೇವೆ ಸಲ್ಲಿಸುವುದನ್ನು ರೂಢಿಸಿಕೊಂಡಲ್ಲಿ ಸಮಾಜದಲ್ಲಿ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕ ಯುವತಿಯರು ಸ್ಪಷ್ಟವಾದ ಗುರಿಯಿಟ್ಟುಕೊಂಡು ಮುನ್ನಡೆಯಬೇಕು ಎಂದು ತಿಳಿಸಿದರು.
ಗ್ರಾಮಗಳ ಸ್ವಚ್ಛತೆ ಮತ್ತು ನೈರ್ಮಲ್ಯತೆಯ ಅರಿವು ಮೂಡಿಸಲು ಕಾಲೇಜಿನಿಂದ ಉತ್ತಮ ಉದ್ದೇಶದೊಂದಿಗೆ ಗ್ರಾಮಗಳ ಸೇವೆಗೆ ಮುಂದಾಗಿರುವುದು ಸಂತಸದ ಸಂಗತಿಯಾಗಿದೆ. ಜನರೂ ಕೂಡ ಸ್ವಚ್ಛತೆ ಬಗ್ಗೆ ಜಾಗ್ರತೆ ವಹಿಸಬೇಕು ಎಂದರು.
ಶಿಬಿರದ ಕುರಿತು ಪ್ರಾಸ್ತಾವಿಕವಾಗಿ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರೊ. ಕೆ.ಎನ್. ಲಕ್ಷ್ಮೀಕಾಂತ್ ಮಾತನಾಡಿ, ಗಾಂಧೀಜಿಯವರ ಜನ್ಮ ಶತಾಬ್ದಿ ಅಂಗವಾಗಿ 1969ರಲ್ಲಿ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಈ ರಾಷ್ಟ್ರೀಯ ಸೇವಾ ಯೋಜನೆ ಜಾರಿಗೆ ತರಲಾಯಿತು. ಗ್ರಾಮೀಣ ಜನರಲ್ಲಿ ಸ್ವಚ್ಛತೆ ಶಿಕ್ಷಣ, ಆರೋಗ್ಯ, ನೈರ್ಮಲ್ಯ ಇತ್ಯಾದಿಗಳ ಬಗ್ಗೆ ಅರಿವು ಮೂಡಿಸುವುದು ರಾಷ್ಟ್ರೀಯ ಸೇವಾ ಯೋಜನೆಯ ಪ್ರಮುಖ ಉದ್ದೇಶವಾಗಿದ್ದು ಸಮಾಜದ ಸೇವೆಯಲ್ಲಿ ಯುವ ಶಕ್ತಿ ತೊಡಗಬೇಕು ಎಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿದ್ದ ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಸಿಎಚ್‌ಸಿ ರಾಜಪ್ಪ ಮಾತನಾಡಿ, ಸಮಾಜ ಸೇವೆಯನ್ನು ನಿಷ್ಕಲ್ಮಶ ಮನಸ್ಸಿನಿಂದ ಮಾಡಿದರೆ ಸಿಗುವಂತಹ ಸಂತೋಷ ಬೇರೆ ಯಾವುದರಿಂದಲೂ ಸಿಗುವುದಿಲ್ಲ. ಗ್ರಾಮೀಣ ಜನರ ಆಗು ಹೋಗುಗಳಿಗೆ ಸ್ಪಂದಿಸಿದಾಗ ನಮ್ಮ ಜನ್ಮ ಸಾರ್ಥಕತೆ ಪಡೆಯುತ್ತದೆ ಎಂದರು.
ಹಿರೇನಲ್ಲೂರು ಜಿಪಂ ಸದಸ್ಯೆ ಪದ್ಮಾ ಚಂದ್ರಪ್ಪ ಮಾತನಾಡಿದರು.  ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ.  ಜಿ.ಎಂ. ಕೊಟ್ರೇಶಪ್ಪ, ಗ್ರಾಪಂ ಅಧ್ಯಕ್ಷೆ ಸರೋಜಮ್ಮ, ಸುನಿತಾ ಜಗದೀಶ್, ಪ್ರೊ. ಕೆ.ಎನ್. ಲಕ್ಷ್ಮೀಕಾಂತ್, ಎಚ್.ಜಿ. ಗುರುದೇವ್, ಎಚ್.ಆರ್. ರವಿಕುಮಾರ್, ಎಚ್.ಎಸ್. ಈಶ್ವರಪ್ಪ, ರೇವಣ ಸಿದ್ದಪ್ಪ, ಗಂಗಾಧರಾಚಾರ್, ಗ್ರಾಮಸ್ಥರು ವಿದ್ಯಾರ್ಥಿಗಳು ಇದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.