ಚಿಕ್ಕಮಗಳೂರು

ನ್ಯಾಯಾಲಯಕ್ಕೆ ನಟಿ ಪೂಜಾ ಗಾಂಧಿ

Published On :

ಕ.ಪ್ರ. ವಾರ್ತೆ  ಚಿಕ್ಕಮಗಳೂರು  ಮಾ.15-
ಕಳೆದ 2004ರಲ್ಲಿ ನಡೆದ ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನೀತಿ  ಸಂಹಿತೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ದಾಖಲಾಗಿದ್ದ ಕೇಸಿನ ಸಂಬಂಧ ಚಲನಚಿತ್ರ ನಟಿ ಪೂಜಾ  ಗಾಂಧಿ ಅವರು ಶುಕ್ರವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು. 2004ರ ಸೆ.3ರಂದು ಪೂಜಾಗಾಂಧಿ ಅವರು ಚಿಕ್ಕಮಗಳೂರು ನಗರಕ್ಕೆ ಜೆಡಿಎಸ್ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದರು. ಆ ವೇಳೆಯಲ್ಲಿ ಅವರು ಪ್ರವಾಸಿ ಮಂದಿರದಲ್ಲಿ ದೃಶ್ಯ ಮಾಧ್ಯಮದೊಂದಿಗೆ ಮಾತನಾಡಿದ ಸಂಬಂಧ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ಕೋರ್ಟ್ನಿಂದ ಸಮನ್ಸ್ ಜಾರಿಯಾಗಿದ್ದರಿಂದ ಅವರು ಖುದ್ದಾಗಿ ಶುಕ್ರವಾರ ಕೋರ್ಟ್ಗೆ ಹಾಜರಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಆ ಸ್ಥಳದಲ್ಲಿ ನೀತಿ ಸಂಹಿತೆ ಜಾರಿಯಾಗಿರುವುದು ಗೊತ್ತಿರಲಿಲ್ಲ. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ಅನ್ವಯ ನ್ಯಾಯಾಲಯಕ್ಕೆ ಹಾಜರಾಗಿದ್ದೇನೆ ಎಂದು ಹೇಳಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.