ಮತದಾರರ ಪಟ್ಟಿ ಸೇರ್ಪಡೆಗೆ ನೂತನ ಕಾರ್ಯಕ್ರಮ
ಚಿಕ್ಕಮಗಳೂರು: ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಪ್ರಕ್ರಿಯೆ ತ್ವರಿತಗೊಳಿಸಲು ಮತ್ತು ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಚುನಾವಣಾ ಆಯೋಗವು ನೂತನ ಕಾರ್ಯಕ್ರಮವೊಂದನ್ನು ಜಾರಿಗೆ ತಂದಿದೆ ಎಂದು ಜಿಲ್ಲಾಧಿಕಾರಿ ವಿ. ಯಶವಂತ್ ಹೇಳಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ವಿಧಾನದ ಬಗ್ಗೆ ಸಮರ್ಪಕ ಅರಿವಿಲ್ಲದಿರುವುದರಿಂದ ಹೊಸ ಮತದಾರರು ಹೆಸರು ಸೇರ್ಪಡೆಯಾಗುವುದು ಕಡಿಮೆಯಾಗುತ್ತಿದೆ. ಇದನ್ನು ತಪ್ಪಿಸಲು 18 ವರ್ಷ ದಾಟಿದವರಿಗೆ ಮತದಾರರ ಪಟ್ಟಿಯ ಸೇರ್ಪಡೆಯ ಬಗ್ಗೆ ಅರಿವು ಮೂಡಿಸಿ, ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಮಾಡುವುದು ಇದರ ಉದ್ದೇಶ ಎಂದರು. ವಿವಿಧ ಇಲಾಖೆಗಳ ಅಧಿಕಾರಿಗಳು ಈ ಸಮಿತಿಯಲ್ಲಿ ಇದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಯುವ ಸಂಘಟನೆಗಳನ್ನು ಈ ಕಾರ್ಯಕ್ರಮದಲ್ಲಿ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.
ಜಿಪಂ ಸಿಇಒ ಪಿ. ಶಿವಶಂಕರ್, ಅಪರ ಜಿಲ್ಲಾಧಿಕಾರಿ ಕೆ.ಪಿ. ಹೊನಕೇರಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

