ಚಿಕ್ಕಮಗಳೂರು

ವಿದ್ಯುತ್ ಬಿಲ್ ಪಾವತಿಸಲು ಸರ್ಕಾರದ ಸಮ್ಮತಿ

Published On :

ಕ.ಪ್ರ. ವಾರ್ತೆ, ತರೀಕೆರೆ.ಮಾ, 16.
ತಾಲೂಕಿನಲ್ಲಿ ಉಬ್ರಾಣಿ ಅಮೃತಾಪುರ ಏತ ನೀರಾವರಿ ಕೆರೆಗಳ ನಿರ್ವಹಣೆ ಮತ್ತು ನೀರು ಉಪಯೋಗಿಸುವ ವಿದ್ಯುತ್ ಶುಲ್ಕವನ್ನು ಸರ್ಕಾರವೇ ಪಾವತಿಸಲು ಸರ್ಕಾರ  ಸಮ್ಮತಿಸಿದೆ ಎಂದು ಶಾಸಕ ಡಿ.ಎಸ್.ಸುರೇಶ್ ತಿಳಿಸಿದ್ದಾರೆ.
ಸಮೀಪದ ಅಮೃತಾಪುರದಲ್ಲಿ ಶನಿವಾರ ಈ ಸಂಬಂಧವಾಗಿ  ನೆಡೆದ ರೈತರ ಸಭೆಯ ನಂತರ ಶಾಸಕ ಡಿ.ಎಸ್.ಸುರೇಶ್ ಅವರು ಸುದ್ಗಿಗಾರರಿಗೆ ಈ ವಿಷಯ ತಿಳಿಸಿದರು.
ಶ್ರೀಗಳ ಸಮ್ಮುಖದಲ್ಲಿ: ಬೆಂಗಳೂರಿನ ತರಳಬಾಳು ಕೇಂದ್ರದಲ್ಲಿ ಸಿರಿಗೆರೆಯ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ರಾಜ್ಯದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್
ಚೆನ್ನಗಿರಿ ಶಾಸಕರು ಮಾಡಾಳು ವಿರೂಪಾಕ್ಷಪ್ಪ ಮತ್ತು ತಾವು ಭಾಗವಹಿಸಿದ್ದ ಸಭೆಯಲ್ಲಿ ಈ ವಿಚಾರವಾಗಿ ಚರ್ಚೆ ನೆಡೆದು ಕೆರೆಗಳ ರಕ್ಷಣೆ ಮತ್ತು ವಿದ್ಯುತ್ ಬಿಲ್ ಪಾವತಿಸಲು ಸರ್ಕಾರ ಸಮ್ಮತಿಸಿದೆ ಎಂದು ಅವರು ತಿಳಿಸಿದರು.
24ರಂದು ಸಮಾರಂಭ: ಏತ ನೀರಾವರಿಯಲ್ಲಿ ಯೋಜನೆಯಡಿ ತಾಲೂಕಿನ ಕೆರೆಗಳಿಗೆ ಪೈಪ್ ಮೂಲಕ ನೀರು ಹಾಯುವಳಿ ಮಾಡಲು ಸರ್ಕಾರ 25 ಕೋಟಿ ತೆಗೆದಿರಿಸಲಾಗಿದೆ ಎಂದು ತಿಳಿಸಿದ ಅವರು ಈ ಸಂಬಂಧವಾಗಿ ಅಮೃತಾಪುರದಲ್ಲಿ ಈ ತಿಂಗಳ 24 ರಂದು ಸಿರಿಗೆರೆ ತರಳಬಾಳು ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿ ಅವರಿಗೆ ಕೃತಜ್ಞತೆ ಸಲ್ಲಿಸುವ ಸಮಾರಂಭವನ್ನು ಏರ್ಪಡಿಸಲಾಗುವುದೆಂದು ಅವರು ತಿಳಿಸಿದರು.
ಜಿ.ಪಂ.ಸದಸ್ಯ ಕೆ.ಆರ್.ಆನಂದಪ್ಪ, ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಎ.ಆರ್.ರಾಜಶೇಖರ್, ಏಪಿಎಂಸಿ ಅಧ್ಯಕ್ಷ ಶಿವಕುಮಾರ್, ಹುಣಸಘಟ್ಟ ಗ್ರಾ.ಪಂ.ಮಾಜಿ ಅಧ್ಯಕ್ಷ ತಿಪ್ಪೇಶ್, ರೈತರು ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.