ಚಿಕ್ಕಮಗಳೂರು

ಹೋರಾಟದ ಮನೋಭಾವ ಬೆಳೆಸಿಕೊಳ್ಳಿ

Published On :

ಕಪ್ರ ವಾರ್ತೆ, ಚಿಕ್ಕಮಗಳೂರು, ಮಾ, 17
ಯುವ ಜನತೆ ವಿದ್ಯಾರ್ಥಿ ಜೀವನದಲ್ಲಿ ಹೋರಾಟದ ಮನೋಭಾವ ಬೆಳೆಸಿಕೊಳ್ಳುವುದರ ಜೊತೆಗೆ ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಡಲು ಮುಂದಾಗಬೇಕೆಂದು ಬಿಜಾಪುರ ಮತ್ತು ಗದಗ ರಾಮಕೃಷ್ಣ ವಿವೇಕಾನಂದ ಆಶ್ರಮದ ಶ್ರೀ ನಿರ್ಬಯಾನಂದ ಸರಸ್ವತಿ ಸ್ವಾಮೀಜಿ ಕರೆ ನೀಡಿದ್ದಾರೆ.
ನಗರದ ಕುವೆಂಪು ಕಲಾಮಂದಿರದಲ್ಲಿ ರಾಮಕೃಷ್ಣ ವಿವೇಕಾನಂದ ಆಶ್ರಮ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಸ್ವಾಮಿ ವಿವೇಕಾನಂದರ 150ನೇ ಜನ್ಮ ದಿನೋತ್ಸವದ ಅಂಗವಾಗಿ ಇತ್ತೀಚೆಗೆ ನಡೆದ ಯುವ ಸಮ್ಮೇಳನವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು.
ಅಣ್ಣಾ ಹಜಾರೆ ಅವರು ತಮ್ಮ 27ನೇ ವಯಸ್ಸಿನಲ್ಲಿ ಆತ್ಮಹತ್ಯೆಗೆ ಆಲೋಚಿಸಿದ್ದರು. ಆ ಸಮಯದಲ್ಲಿ ಸ್ವಾಮಿ ವಿವೇಕಾನಂದರ ಜೀವಗಾಥೆಯ ಬಗ್ಗೆ ಅಧ್ಯಯನ ನಡೆಸಿ ತಮ್ಮ ಮನಸ್ಸನ್ನು ಪರಿವರ್ತಿಸಿಕೊಂಡು ಸಾಮಾಜಿಕ ಸಮಸ್ಯೆಗಳ ವಿರುದ್ಧ ಹೋರಾಟ ಆರಂಭಿಸಿದರು.
ಸಂಚಲನ: ಮಹಾತ್ಮ ಗಾಂಧೀಜಿ ನಂತರ ಶಾಂತಿಯುತ ಹೋರಾಟದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿ ಅಣ್ಣಾ ಹಜಾರೆ ಅವರು ಜಗತ್ತೇ ಹಿಂತಿರುಗಿ ನೋಡುವಂತೆ ಹೋರಾಟ ರೂಪಿಸಿದ್ದಾರೆ. ಇಂದಿನ ವಿದ್ಯಾರ್ಥಿಗಳು ಇಂತಹ ಹೋರಾಟದ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.
ಬೆಂಗಳೂರಿನ ರಾಮಕೃಷ್ಣ ಯೋಗಾಶ್ರವುದ ಯೋಗೇಶ್ವರಾನಂದಜೀ ಮಹಾರಾಜ್, ಧಾರವಾಡ ರಾಮಕೃಷ್ಣ ವಿವೇಕಾನಂದ ಆಶ್ರಮದ ವಿಜಯಾನಂದ ಸರಸ್ವತಿ, ಬೆಂಗಳೂರು ರಾಮಕೃಷ್ಣ ಆಶ್ರಮದ ಶಾಂತಾನಂ ಸರಸ್ವತಿ ಸ್ವಾಮೀಜಿ ಹಾಗೂ ಬೆಂಗಳೂರಿನ ಯಲಹಂಕದ ರಾಮಕೃಷ್ಣ ವಿವೇಕಾನಂದ ವೇದಾಂತಾಶ್ರಮದ ಸ್ವಾಮಿ ಅಭಯಾನಂದಜೀ ಮಹಾರಾಜ್  ಇದ್ದರು. ಸಮಾಜ ಸೇವಕ ಪಿ. ಸುದೀಶ್ ಕುಮಾರ್‌ರನ್ನು ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಸನ್ಮಾನಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.