ಚಿಕ್ಕಮಗಳೂರು

ಮಹಿಳೆ ಸಮಾಜದ ಕಣ್ಣು

Published On :

ಕನ್ನಡಪ್ರಭ ವಾರ್ತೆ, ತರೀಕೆರೆ, ಮಾ.17
ಮಹಿಳೆ ಸಮಾಜದ ಕಣ್ಣು ಎಂದು ಪಟ್ಟಣದ ದಿವ್ಯಜ್ಯೋತಿ ಆಶ್ರಮದ ವಂದನೀಯ ಸ್ವಾಮಿ ಸತೀಶ್ ಕುಮಾರ್ ತಿಳಿಸಿದ್ದಾರೆ.
ನವಜೀವನ್ ಸೇವಾ ಕೇಂದ್ರದಿಂದ ಪಟ್ಟಣದ ಕೋಡಿಕ್ಯಾಂಪ್ ಆರಾಧನಾ ಕಾನ್ವೆಂಟ್ ಆವರಣದಲ್ಲಿ ಏರ್ಪಡಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳಬೇಕು, ಒಗ್ಗಟ್ಟು  ಮತ್ತು ಸಮಾನತೆ ಅಗತ್ಯ, ಸಮಾನತೆಯಿಂದ ದೇಶದ ಅಭಿವೃದ್ಧಿ ಸಾಧ್ಯ ಎಂದರು.
ಆರಾಧನಾ ಕಾನ್ವೆಂಟ್‌ನ ಮುಖ್ಯ ಶಿಕ್ಷಕಿ ಸಿಸ್ಟರ್ ಲಲಿತ ಮಾತನಾಡಿ, ಎಲ್ಲ ಕ್ಷೇತ್ರಗಳಲ್ಲಿ ಮಹಿಳೆಯರ ಕೊಡುಗೆ ಅಪಾರವಾಗಿದೆ. ರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ  ಇಲಾಖೆ ಮಹಿಳೆಯರು ಸಹಕಾರ ಗುಂಪು ಚಟುವಟಿಕೆಗಳನ್ನು ನಿರ್ವಹಿಸಬೇಕು, ಮಹಿಳೆಯರು ಆರೋಗ್ಯ ಮಟ್ಟವನ್ನು ಕಾಪಾಡಿಕೊಳ್ಳಬೇಕು, 21 ರಿಂದ ಸ್ತ್ರೀಶಕ್ತಿ ಸಂಘಗಳು ತಯಾರಿಸಿದ ವಸ್ತುಗಳ ಮಾರಾಟ ಮೇಳವನ್ನು ಪಟ್ಟಣದಲ್ಲಿ ಏರ್ಪಡಿಸಲಾಗಿದೆ ಎಂದರು.
ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಬಿ.ಎಸ್. ಹೆಗಡೆ ಸ್ಪೂರ್ತಿ ಮಹಾಸಂಘದ ಅಧ್ಯಕ್ಷೆ ಸುಜಯ, ವಕೀಲೆ ಬಿ.ಬಿ. ಗೀತಾ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.