ಸುವರ್ಣ ಗ್ರಾಮ ಕಾಮಗಾರಿಗೆ ಗುದ್ದಲಿ ಪೂಜೆ
ಕಪ್ರವಾರ್ತೆ, ಮೂಡಿಗೆರೆ, ಮಾ.18: ಹಂತೂರು ಗ್ರಾಪಂ ವ್ಯಾಪ್ತಿಯ ಹಂತೂರು ಮತ್ತು ಕಣಚೂರು ಗ್ರಾಮಗಳಲ್ಲಿ ಸುಮಾರು ರು. 40 ಲಕ್ಷ ವೆಚ್ಚದಲ್ಲಿ ಸುವರ್ಣ ಗ್ರಾಮ ಯೋಜನೆ ಕಾಮಗಾರಿಗೆ ಶಾಸಕ ಎಂ.ಪಿ. ಕುಮಾರಸ್ವಾಮಿ ಗುದ್ದಲಿಪೂಜೆ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ಸರ್ಕಾರ ಗ್ರಾಮೀಣಾಭಿವೃದ್ಧಿ ಸಹಿತ ವಿವಿಧ ಯೋಜನೆ ಜಾರಿಗೊಳಿಸುವ ಮೂಲಕ ಹಳ್ಳಿಗಳತ್ತ ಹೆಚ್ಚಿನ ಮುತುವರ್ಜಿ ವಹಿಸಿದೆ. ಕಳೆದ 60 ವರ್ಷಗಳಿಂದ ನಡೆಯದ ಅಭಿವೃದ್ಧಿ ಕೆಲಸಗಳನ್ನು ಬಿಜೆಪಿ ಸರ್ಕಾರ 5 ವರ್ಷದ ಅವಧಿಯಲ್ಲಿ ಮಾಡಿ ಮುಗಿಸಿದೆ. ವಿಪಕ್ಷಗಳು ಕೇವಲ ರಾಜಕೀಯ ಕಾರಣಗಳಿಗಾಗಿ ವಿನಾ ಕಾರಣ ಆಡಳಿತಾರೂಡರ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದರು.
ಇನ್ನಷ್ಟು ಅಭಿವೃದ್ಧಿ: ಭವಿಷ್ಯದ ಚುನಾವಣೆಗೂ ಮುನ್ನ ಇನ್ನಷ್ಟು ಅಭಿವೃದ್ಧಿ ಕೆಲಸ ನಡೆಯಲಿವೆ ಎಂದ ಅವರು ತಾಲೂಕಿನ ಗೋಣಿಬೀಡು ಹೋಬಳಿಯ ಸಾಲು ಮರ ಗ್ರಾಮದ ಗ್ರಾಮದೇವತೆ ಬೀರ ದೇವರ ದೇವಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಹಂತೂರು ಗ್ರಾಪಂ ಅಧ್ಯಕ್ಷೆ ಎಚ್.ಟಿ. ಕಲಾವತಿ ತಮ್ಮಣ್ಣಗೌಡ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಸದಸ್ಯೆ ನೇಪಾ ಆಧಿತ್ಯ, ಗ್ರಾಪಂ ಉಪಾಧ್ಯಕ್ಷ ಯು.ಆರ್. ರಾಮಚಂದ್ರಾಚಾರ್, ಸದಸ್ಯ ಕಣಚೂರು ವಿನೋದ್, ಎಚ್.ಪಿ. ಸೀತಮ್ಮ, ಸಿದ್ದಯ್ಯ, ವಸಂತಯ್ಯ, ಕಾರ್ಯದರ್ಶಿ ಪ್ರಶಾಂತ್ ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

