21ರಂದು ಅಂತ್ಯೋದಯ ಯೋಜನೆಗೆ ಚಾಲನೆ
ಕ.ಪ್ರ.ವಾರ್ತೆ,ಕೊಪ್ಪ, ಮಾ.18
ರಾಜ್ಯದ 98 ಲಕ್ಷ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ 2 ರುಪಾಯಿಗೆ ಅಕ್ಕಿ ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ 21 ರಂದು ಪಟ್ಟಣದಲ್ಲಿ ಚಾಲನೆ ನೀಡಲಿದ್ದಾರೆ ಎಂದು ಸಚಿವ ಜೀವರಾಜ್ ತಿಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಪ್ಪದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ 21ರ ಮಧ್ಯಾಹ್ನ 12ಕ್ಕೆ ನಡೆಯುವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹಾಗೂ ಸಂಪುಟದ ಹಲವು ಸಚಿವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಅನುಕೂಲ: ಈ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ರಾಜ್ಯದ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ದಾರರಿಗೆ ನೀಡುತ್ತಿದ್ದ ಅಕ್ಕಿಯ ಬೆಲೆಯನ್ನು 3 ರಿಂದ 2 ರು.ಗೆ ಇಳಿಸಲಾಗಿದ್ದು, ಇದರಿಂದ ರಾಜ್ಯದ 98 ಲಕ್ಷ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.
ಉದ್ಘಾಟನೆ: ಇದೇ ಸಂದರ್ಭದಲ್ಲಿ ಕೊಪ್ಪದ ಮಾಹಿಳಾ ಪಾಲಿಟೆಕ್ನಿಕ್ ಕಾಲೇಜ್, ಅಟಲ್ ಬಿಹಾರಿ ವಾಜಪೇಯಿ ಮಾದರಿ ವಸತಿಶಾಲೆ, ಎನ್.ಆರ್. ಪುರದ ಐಟಿಐ ಕಾಲೇಜು, ಗುಡ್ಡೇ ತೋಟದ ತೂಗುಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಎನ್.ಆರ್. ಪುರದ ಎಂಯುಎಸ್ಎಸ್ ವಿದ್ಯುತ್ ವಿತರಣಾ ಕೇಂದ್ರ, ನಮ್ಮ ಗ್ರಾಮ-ನಮ್ಮ ರಸ್ತೆ ಯೋಜನೆಯಡಿ ಮಂಜೂರಾದ ರಸ್ತೆ ಅಭಿವೃದ್ಧಿ ಕಾಮಗಾರಿಗಳು, ನಾರ್ವೆ ದೋಣಿಗಂಡಿಯ ತೂಗುಸೇತುವೆಗಳ ಉಧ್ಘಾಟನೆಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ನೇರವೇರಿಸಲಿದ್ದಾರೆಂದು ತಿಳಿಸಿದರು.
ಕೊಪ್ಪದ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿಗೆ ಬೋಧಕ, ಬೋಧಕೇತರ ಸಬ್ಬಂದಿ ನೇಮಕಾತಿಗೂ ಅನುಮೋದನೆ ದೊರೆತಿದ್ದು, ಎಂಕಾಂ ಕಾಲೇಜು ಕಟ್ಟಡದ 1.65 ಕೋಟಿ ವೆಚ್ಚದ ನವೀಕರಣ ಕಾಮಗಾರಿಗೆ ಮಂಜೂರಾತಿ ದೊರೆತಿದೆ ಎಂದರು. ಕ್ಷೇತ್ರದ 3 ತಾಲೂಕುಗಳ ಪಪಂಗಳಿಗೆ ತಲಾ 5 ಕೋಟಿ ಅನುದಾನ ಕೊಡಿಸಿದ್ದು, ಅಭಿವೃದ್ಧಿ ಕಾಮಗಾರಿ ಟೆಂಡರ್ ಪ್ರಕ್ರಿಯೆ ಮುಗಿದಿದೆ ಎಂದರು. ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ ಬಿದರಗೋಡು-ಜಯಪುರ-ಆಲ್ದೂರು ರಸ್ತೆ ಅಭಿವೃದ್ಧಿಗೆ 23 ಕೋಟಿ ಅನುಮೋದನೆ ದೊರೆತಿದೆ. 16 ಕೋಟಿ ವೆಚ್ಚದಲ್ಲಿ ಕೊಪ್ಪ-ಕೆಸವೆ-ಸಿದ್ದರಮಠ, ಹರಿಹರಪುರ-ಕಮ್ಮರಡಿ, ನಾರ್ವೆ-ನಾಗಲಾಪುರ, ಕಾವಡಿ-ಶಾನುವಳ್ಳಿ, ಮಕ್ಕಿ-ಕೊಪ್ಪ-ಕೊಗ್ರೆ, ಸಂಗಮೇಶ್ ಪೇಟೆ-ಹುಣಸೆಹಳ್ಳಿ ಹೊಸ ರಸ್ತೆ ಕಾಮಗಾರಿಗೂ ಆಡಳಿತಾತ್ಮಕ ಮಂಜೂರಾತಿ ದೊರತಿದ್ದು, ಇದೇ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

