ಚಿಕ್ಕಮಗಳೂರು

21ಕ್ಕೆ ಹರಪನಹಳ್ಳಿಗೆ ಸಿಎಂ ಜಗದೀಶ್ ಶೆಟ್ಟರ್

Published On :

ಕ.ಪ್ರ.ವಾರ್ತೆ,ಹರಪನಹಳ್ಳಿ, ಮಾ.18
ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ನೆರವೇರಿಸಲು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಟ್ಟಣಕ್ಕೆ  ಮಾ.21ರಂದು ಗುರುವಾರ ಆಗಮಿಸಲಿದ್ದಾರೆ.
  ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿದ   ಬಿಜೆಪಿ ತಾಲೂಕು ಘಟಕದ ಅಧ್ಯಕ  ಆರುಂಡಿ ನಾಗರಾಜ, ಅಂದು ಮುಖ್ಯಮಂತ್ರಿಯವರು ಬೆಳಿಗ್ಗೆ 10 ಗಂಟೆಗೆ  ಪಟ್ಟಣದಲ್ಲಿ ರೈತ ಸಂಪರ್ಕ ಕೇಂದ್ರ ಕಟ್ಟಡ ಉದ್ಘಾಟಿಸುವರು. ನಂತರ ನೀಲಗುಂದ ಕ್ರಾಸ್‌ನಲ್ಲಿ 220 ಕೆ.ವಿ.ಯ ನಿರಂತರ ವಿದ್ಯುತ್ ಜ್ಯೋತಿ ಯೋಜನೆಗೆ ಚಾಲನೆ ನೀಡುವರು.
ಬಾಗಳಿಯಲ್ಲಿ ಮಧ್ಯಾಹ್ನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡ ಉದ್ಘಾಟಿಸುವರು ಎಂದು ಅವರು ಹೇಳಿದರು.
ಕಾಂಗ್ರೆಸ್ ಆರೋಪ ಸುಳ್ಳು: ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಹಣ ಬಲ ಹಾಗೂ ತೋಳ್ಬಲದಿಂದ ಹೆಚ್ಚು ಸ್ಥಾನ ಗೆದ್ದಿದೆ ಎಂಬ ಕಾಂಗ್ರೆಸ್ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಶಾಸಕರ ಆಪ್ತ ಸಹಾಯಕ ಓಂಕಾರಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೆ. ಹಾಲೇಶ್ ತಾಲೂಕಿನಲ್ಲಿ ಅಭಿವೃದ್ಧಿ ಆಗಿಲ್ಲ ಎಂದು ಹೇಳಿರುವುದು ನೋಡಿದರೆ ಅವರಿಗೆ ಬುದ್ದಿ ಭ್ರಮಣೆಯಾಗಿದೆ ಎಂದು ಟೀಕಿಸಿದರು.  
ಮುಖಂಡ ಜಿ. ನಂಜನಗೌಡ ಮಾತನಾಡಿ, ಕಾಂಗ್ರೆಸ್ ಪಕ್ಷದವರಿಗೆ ಸೋಲನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇಲ್ಲ ಎಂದರು. ಬಿಜೆಪಿ ಮುಖಂಡರಾದ ಗಿರಿರಾಜರೆಡ್ಡಿ, ಎಂ.ಪಿ. ನಾಯ್ಕ, ರವಿಕುಮಾರ,  ಬಿಜೆಪಿ ಪುರಸಭಾ ಸದಸ್ಯರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.   

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.