ಟ್ಯಾಂಕರ್ ಮೂಲಕ ನೀರು ಪೂರೈಸಲು ಮನವಿ
ಕಪ್ರವಾರ್ತೆ,ಚಿಕ್ಕಮಗಳೂರು,ಮಾ. 18
ಕಡೂರು ಪಟ್ಟಣಕ್ಕೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಬೇಕು ಎಂದು ಆಗ್ರಹಿಸಿ ಜಿಪಂ ಮಾಜಿ ಅಧ್ಯಕ್ಷ ಕೆ.ಎಂ. ಕೆಂಪರಾಜ್ ಅವರು ಜಿಲ್ಲಾಧಿಕಾರಿ ವಿ. ಯಶವಂತ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.
ಮಳೆ ಅಭಾವದಿಂದ ಕಡೂರು ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಇದರಿಂದಾಗಿ ಬಹಳ ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ ಸಂದರ್ಭದಲ್ಲಿ ಅವರು ತಿಳಿಸಿದರು.
ಕಡೂರು ಪಟ್ಟಣಕ್ಕೆ ಕೊಳವೆ ಬಾವಿಗಳೇ ಕುಡಿಯುವ ನೀರಿನ ಮೂಲವಾಗಿದೆ. ಇಲ್ಲಿ 5 ಓವರ್ ಹೆಡ್ ಟ್ಯಾಂಕ್ಗಳಿದ್ದು, ಇವುಗಳಿಗೆ ನಗರದ ವಿವಿಧೆಡೆ ಇರುವ 15 ಬೋರ್ವೆಲ್ಗಳಿಂದ ನೀರು ತುಂಬಿಸಲಾಗುತ್ತಿದೆ ಎಂದರು.
ಕೇವಲ 3 ಬೋರ್ವೆಲ್: ಅಂತರ್ಜಲ ಬತ್ತಿ ಹೋಗಿದ್ದರಿಂದ ಪ್ರಸ್ತುತ 3 ಬೋರ್ವೆಲ್ಗಳಲ್ಲಿ ಮಾತ್ರ ನೀರು ದೊರೆಯುತ್ತಿದೆ. ಇನ್ನುಳಿದ ಬೋರ್ವೆಲ್ಗಳು ಪ್ರಯೋಜನಕ್ಕೆ ಬಾರದಂತಾಗಿವೆ. ಹಲವೆಡೆ ಬೋರ್ವೆಲ್ಗಳು ಕೆಟ್ಟು ನಿಂತಿವೆ. ಕೂಡಲೇ ಅವುಗಳನ್ನು ದುರಸ್ತಿಗೊಳಿಸಬೇಕು ಎಂದು ಆಗ್ರಹಿಸಿದರು.
ಬರ ಪರಿಹಾರ ಯೋಜನೆಯಡಿ ಬಿಡುಗಡೆಯಾಗಿರುವ ಹಣವನ್ನು ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆಗೆ ಖರ್ಚು ಮಾಡುತ್ತಿಲ್ಲ. ಬದಲಿಗೆ ಬೇಕಾಬಿಟ್ಟಿ ವೆಚ್ಚ ಮಾಡಿದ್ದಾರೆ. ಇದರ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದರು.
ಈಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯ ಆನಂದ್, ಪುರಸಭೆ ಸದಸ್ಯ ಬಷಿರ್ ಸಾಬ್, ಎಂ. ಸೋಮಶೇಖರ್, ಸಿ. ಜಯಣ್ಣ, ರವಿ, ಕೃಷ್ಣಮೂರ್ತಿ, ಮೋಹನ್ ಕುಮಾರ್, ಖಾದರ್, ಮಂಜಣ್ಣ, ಹರೀಶ್, ಮಹದೇವ್ ಸೇರಿದಂತೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

