ಚಿಕ್ಕಮಗಳೂರು

ಅಕ್ರಮ ಮದ್ಯ ಮಾರಾಟ: ಕ್ರಮಕ್ಕೆ ಆಗ್ರಹ

Published On :

ಚಿಕ್ಕಮಗಳೂರು ಮಾ.19
ನಗರದ ಉಪ್ಪಳ್ಳಿ- ಶಾಂತಿನಗರ (ಕಲ್ಲುದೊಡ್ಡಿ)ದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತಕ್ರಮ ಕೈಗೊಳ್ಳುವಂತೆ ಶ್ರೀರಾಮಸೇನೆ ಜಿಲ್ಲಾಡಳಿತವನ್ನು ಆಗ್ರಹಿಸಿದೆ.
ನಗರದ ಪ್ರಮುಖ ಬೀದಿಗಳಲ್ಲಿ ಶ್ರೀರಾಮ ಸೇನೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಆರ್. ರಾಜು ಅವರ ನೇತೃತ್ವದಲ್ಲಿ ಸ್ಥಳೀಯರು ಪ್ರತಿಭಟನಾ ಮೆರವಣಿಗೆ ನಡೆಸಿದರು.
ಉಪ್ಪಳ್ಳಿ- ಶಾಂತಿನಗರದಲ್ಲಿ ಬಹುತೇಕ ಕೂಲಿ ಕಾರ್ಮಿಕರು ಇದ್ದು, ಇಲ್ಲಿನ ಜನರು ಕೂಲಿಯ ಮೇಲೆ ಅವಲಂಬಿತರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಈ ಭಾಗದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರ ಬಲೆಗೆ ಬಿದ್ದಿರುವ ಜನರು ಜೀವನ ನಡೆಸುವುದೇ ದುಸ್ತರವಾಗಿದೆ. ಕುಟುಂಬಗಳ ನೆಮ್ಮದಿ ಹಾಳಾಗಿದೆ. ಇಲ್ಲಿ ಪ್ರತಿನಿತ್ಯ ಸಣ್ಣಪುಟ್ಟ ಗಲಾಟೆ, ಕುಟುಂಬಗಳಲ್ಲಿ ಪರಸ್ಪರ ಹೊಡೆದಾಟಗಳು ನಡೆಯುತ್ತಿದ್ದು, ಕುಡಿತದಿಂದಾಗಿ ಹಲವಾರು ಕುಟುಂಬಗಳು ಬೀದಿಗೆ ಬೀಳುವ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಇತ್ತೀಚೆಗೆ ಕುಡಿತದಿಂದ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಕುಡಿತದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.