ಚಿಕ್ಕಮಗಳೂರು

ಅಭಿವೃದ್ಧಿ ಕೆಲಸಗಳೇಶ್ರೀರಕ್ಷೆ: ಎಂಪಿಕೆ

Published On :

ಕ.ಪ್ರ ವಾರ್ತೆ ಚಿಕ್ಕಮಗಳೂರು, ಮಾ.19
ಕ್ಷೇತ್ರದಾದ್ಯಂತ ಮಾಡಿರುವ ಅಭಿವೃದ್ಧಿ ಕೆಲಸಗಳೇ ನನಗೆ ಶ್ರೀರಕ್ಷೆ. ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಗ್ರಾಮಗಳ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಜನರ ವಿಶ್ವಾಸ ಗಳಿಸಿದ್ದೇನೆ ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದ್ದಾರೆ.
ತಾಲೂಕಿನ ಮರ್ಲೆ ಗ್ರಾಮದಲ್ಲಿ ಮಂಗಳವಾರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಈ ಗ್ರಾಮ ಪಂಚಾಯಿತಿಗೆ 3.5 ಕೋಟಿಗೂ ಹೆಚ್ಚು ಅನುದಾನ ಬಿಡುಗಡೆಗೊಳಿಸಿ ಗ್ರಾಮದ ಎಲ್ಲಾ ರಸ್ತೆಗಳನ್ನೂ ಡಾಂಬರೀಕರಣಗೊಳಿಸಿ ಅಭಿವೃದ್ಧಿ ಪಡಿಸಲಾಗಿದೆ ಎಂದರು.
ಕಡೆಗಣಿಸಿದ್ದವು: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಕಳೆದ 50 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಚುನಾವಣಾ ಸಂದರ್ಭದಲ್ಲಿ ಸುಳ್ಳು ಭರವಸೆ ನೀಡಿ ಹಣ ಮತ್ತು ಹೆಂಡ ಹಂಚಿ ಮತ ಪಡೆದು ಗ್ರಾಮಗಳನ್ನು ಕಡೆಗಣಿಸಿದ್ದವು ಎಂದು ಆರೋಪಿಸಿದರು.
ಜಿಪಂ ಸದಸ್ಯ ನಿರಂಜನ್ ಮಾತನಾಡಿ, ರೈತರಿಗೆ ಅನುಕೂಲವಾಗುವಂತೆ ಗ್ರಾಮಗಳ ಕೆರೆ ಅಭಿವೃದ್ಧಿಪಡಿಸಿ ಸೂರನಹಳ್ಳಿಗೆ ಮತ್ತು ರಾಮೇದೇವರಹಳ್ಳಿಗೆ 6 ಲಕ್ಷ ವೆಚ್ಚದಲ್ಲಿ ಕುಡಿಯುವ ನೀರಿಗೆ ಪೈಪ್ ಲೈನ್ ಹಾಕಿಸಲಾಗಿದೆ. ಬಿಜೆಪಿ ನಂಬಿ ಮತ ನೀಡಿದ ಮತದಾರರಿಗೆ ಯಾವುದೇ ದ್ರೋಹ ಮಾಡದೆ ಅನೇಕ ಜನಪರ ಯೋಜನೆಗಳನ್ನು ರೂಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಎಪಿಎಂಸಿ ಸದಸ್ಯ ನಿಂಗೇಗೌಡ, ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷೆ ಮೀನಾಕ್ಷಿ ಧರ್ಮಯ್ಯ, ಗ್ರಾಪಂ ಅಧ್ಯಕ್ಷ ಚಂದ್ರಪ್ಪ, ಬೀರೇಗೌಡ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.