ಚಿಕ್ಕಮಗಳೂರು

ಕಾಲೇಜು ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ

Published On :

ಮೂಡಿಗೆರೆ: ಪಟ್ಟಣದ ಡಿಎಸ್‌ಬಿಜಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಸಭಾಂಗಣ, ಹೆಚ್ಚುವರಿ ತರಗತಿಗಳ ಕೊಠಡಿಗಳ ನಿರ್ಮಾಣದ ಶಂಕುಸ್ಥಾಪನೆ ಹಾಗೂ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಯ ಗುದ್ದಲಿ ಪೂಜೆಯನ್ನು ಮಂಗಳವಾರ ಶಾಸಕ ಎಂ.ಪಿ. ಕುಮಾರಸ್ವಾಮಿ ನೆರವೇರಿಸಿದರು.
 ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕೆಲ ವರ್ಷಗಳ ಹಿಂದೆ ಕಾಲೇಜಿನ ವಿದ್ಯಾರ್ಥಿಗಳು ಕೊಠಡಿಯೊಳಗೆ ಛತ್ರಿ ಹಿಡಿದುಕೊಂಡು ಕೂರುವ ಸ್ಥತಿ ಉಂಟಾಗಿತ್ತು. ಈ ಕುರಿತು ವಿದ್ಯಾರ್ಥಿಗಳು ಪ್ರತಿಭಟಿಸುವ ಮೂಲಕ ಸರಕಾರದ ಗಮನ ಸೆಳೆದಿದ್ದರು. ಅದರ ಫಲವಾಗಿ ಇಂದು ಕಾಲೇಜಿಗೆ ನೂತನ ಕೊಠಡಿಗಳ ನಿರ್ಮಾಣ ಹಾಗೂ ಹೆಚ್ಚುವರಿ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಕಾಲೇಜಿಗೆ ಪಾರ್ಕ್ ಹಾಗೂ ಅಕಾಡೆಮಿ ವಾತಾವರಣ ಆಗಬೇಕೆಂಬ ಮಹಾದಾಸೆ ಇದ್ದು, ಅದನ್ನು ಪೂರೈಸುವಲ್ಲಿ ಶ್ರಮವಹಿಸುತ್ತೇನೆಂದು ಹೇಳಿದರು.
 ರಾಜ್ಯ ಅರಣ್ಯ ವಸತಿ ಹಾಗೂ ವಿಹಾರಧಾಮ ನಿಗಮದ ಅಧ್ಯಕ್ಷ ಎಂ.ಕೆ. ಪ್ರಾಣೇಶ್ ಮಾತನಾಡಿ, ಕಾಲೇಜಿನಲ್ಲಿ ಗುಣ ಮಟ್ಟದ ವಿದ್ಯಾಭ್ಯಾಸ ಸಿಗುತ್ತಿದೆ. ಗ್ರಾಮೀಣ ಭಾಗದಿಂದ ಬರುವ ಬಡ ವಿದ್ಯಾರ್ಥಿಗಳಿಗೆ ಇಂತಹ ಸೌಲಭ್ಯ ಎಲ್ಲಿಯೂ ಸಿಗುವುದಿಲ್ಲ. ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಯಶಸ್ವಿಯಾಗಿ ಪೂರೈಸಿಕೊಂಡು ಇದರ ಸುದಪಯೋಗ ಪಡೆಯಬೇಕೆಂದು ಮನವಿ ಮಾಡಿದರು.
 ಜಿಪಂ ಸದಸ್ಯ ಅರೆಕುಡಿಗೆ ಶಿವಣ್ಣ, ತಾಪಂ ಅಧ್ಯಕ್ಷ ಶೇಷಗಿರಿ, ಡಿ.ಬಿ. ಸುಬ್ಬೇಗೌಡ, ಜೆ.ಎಸ್. ರಘು, ಪ್ರಾಂಶುಪಾಲ ದೊಡ್ಡಯ್ಯ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.