ವಾರದೊಳಗೆ 300 ಹಕ್ಕುಪತ್ರ ವಿತರಣೆ
ಕ.ಪ್ರ.ವಾರ್ತೆ \ ಸಾಗರ \ ಮಾ.19
ಮುಂದಿನ ಒಂದು ವಾರದಲ್ಲಿ ಬಗರ್ ಹುಕುಂ ಸಕ್ರಮ ಕೋರಿ ಅರ್ಜಿ ಸಲ್ಲಿಸಿರುವ 300 ಫಲಾನುಭವಿಗಳಿಗೆ ಹಕ್ಕುಪತ್ರವನ್ನು ನೀಡಲಾಗುವುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಬಗರ್ಹುಕುಂ ಸಮಿತಿ ಸಭೆಯಲ್ಲಿ ಮಾತನಾಡಿ, ಬೇರೆ ಬೇರೆ ಕಾನೂನು ತೊಡಕುಗಳಿಂದಾಗಿ ಹಕ್ಕುಪತ್ರ ನೀಡುವಲ್ಲಿ ವಿಳಂಬವಾಗಿದೆ.
ತಹಸೀಲ್ದಾರ್ ಸೇರಿದಂತೆ ಅಧಿಕಾರಿಗಳು ಸಹ ನಮ್ಮ ವೇಗಕ್ಕೆ ಸ್ಪಂದಿಸದೆ ಇರುವುದರಿಂದ ಹಕ್ಕುಪತ್ರ ನೀಡುವಲ್ಲಿ ವಿಳಂಬವಾಗುತ್ತಿದೆ ಎಂದರು.
ಹೊಸನಗರ ಮಾದರಿ: ಬಗರ್ಹುಕುಂ ಸಕ್ರಮ ಕೋರಿ ಸುಮಾರು 22 ಸಾವಿರ ಅರ್ಜಿಗಳು ಬಂದಿವೆ. ತಹಸೀಲ್ದಾರ್ ಕಚೇರಿಯಲ್ಲಿ ಪುಸ್ತಕದಲ್ಲಿ ಹೆಸರಿದ್ದರೂ, ಅರ್ಜಿಗಳು ನಾಪತ್ತೆಯಾದ ಅನೇಕ ಪ್ರಕರಣಗಳಿವೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹೊಸನಗರ ತಾಲೂಕಿನಲ್ಲಿ ತಹಸೀಲ್ದಾರರ ಸಕ್ರಿಯ ಪಾಲ್ಗೊಳ್ಳುವಿಕೆಯಿಂದ ಹಕ್ಕುಪತ್ರವನ್ನು ನೀಡಲಾಗಿದೆ. ಅದೇ ಮಾದರಿಯನ್ನು ಮುಂದಿನ ದಿನಗಳಲ್ಲಿ ಸಾಗರ ತಾಲೂಕಿನಲ್ಲಿಯೂ ಅಳವಡಿಸುವ ಚಿಂತನೆ ಹೊಂದಲಾಗಿದೆ ಎಂದು ಹೇಳಿದರು.
ಒಟ್ಟು 900 ಬಗರ್ಹುಕುಂ ಸಕ್ರಮ ಹಕ್ಕುಪತ್ರ ನೀಡುವ ಪಟ್ಟಿ ಸಿದ್ಧವಾಗಿದ್ದು, ಪ್ರಥಮ ಕಂತಿನಲ್ಲಿ 300 ಜನರಿಗೆ ನೀಡಲಾಗುವುದು. ಕೆಲವು ಕಡೆಗಳಲ್ಲಿ ಅರಣ್ಯ ಭೂಮಿ ಹಾಗೂ ಸರ್ಕಾರಿ ಭೂಮಿ ಕುರಿತು ಜಂಟಿ ಸರ್ವೆಯ ಅಗತ್ಯವಿದೆ. ಸರ್ವೆ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ತಹಸೀಲ್ದಾರ್ ಆರ್. ರಾಜಣ್ಣ, ಬಗರ್ಹುಕುಂ ಸಮಿತಿ ಸದಸ್ಯರಾದ ಆರ್.ಸಿ. ಮಂಜುನಾಥ್, ಸುಲೋಚನಮ್ಮ ಹಾಗೂ ಅಧಿಕಾರಿಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

