ಕಡೂರಿನಲ್ಲಿ ಮಹಿಳಾ ದಿನಾಚರಣೆ
ಕನ್ನಡಪ್ರಭ ವಾರ್ತೆ ಕಡೂರು ಮಾ.19
ಪಟ್ಟಣದಲ್ಲಿ ಚಿಕ್ಕಮಗಳೂರು ಮಹಿಳಾ ವಿವಿದೋದ್ದೇಶ ಸಹಕಾರ ಸಂಸ್ಥೆಯ ಕಡೂರು ವಿಭಾಗದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಯಿತು.
ಸಮೀಪದ ರಾಷ್ಟ್ರೀಯ ಹೆದ್ದಾರಿ 206 ರ ಪಕ್ಕದಲ್ಲಿರುವ ಮರಿಯಾ ನಿವಾಸದ ಕಚೇರಿಯಲ್ಲಿ ನಡೆದ ಕಾರ್ಯಕ್ರಮವನ್ನು ಜಿಪಂ ಉಪಾಧ್ಯಕ್ಷೆ ಮಾಲಿನಿಬಾಯಿ ರಾಜನಾಯ್ಕ ಉಧ್ಘಾಟಿಸಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಹಿಳೆಯರು ಪುರುಷರಿಗೆ ಸಮಾನವಾಗಿ ದುಡಿಯುತ್ತಾ ಜೀವನ ನಡೆಸುತ್ತಿದ್ದಾರೆ. ಎಲ್ಲೆಡೆ ಮಹಿಳೆಯನ್ನು ಶೋಷಿತರನ್ನಾಗಿಸುವ ಘಟನೆಗಳೇ ಹೆಚ್ಚಿರುವ ಇಂದಿನ ದಿನಗಳಲ್ಲಿ ಮಹಿಳೆಯರು ತಮ್ಮ ಸ್ವಾಭಿಮಾನ ಉಳಿಸಿಕೊಂಡು ಬುದಕುತ್ತಿರುವುದು ಹೆಮ್ಮೆ ತರುತ್ತದೆ ಎಂದರು.
ಮಹಿಳಾ ಸಹಕಾರ ಸಂಸ್ಥೆಯ ಸಂಯೋಜಕ ಪ್ರಶಾಂತ್ ಮಾತನಾಡಿ, 35 ವರ್ಷದಿಂದ ಸಂಸ್ಥೆಯು ಕಡೂರು ವಿಭಾಗದಲ್ಲಿ ಮಹಿಳಾ ಸಬಲೀಕರಣಕ್ಕಾಗಿ ದುಡಿಯತ್ತಿದೆ. ಇದರಿಂದ ಮಹಿಳೆಯರಲ್ಲಿ ಜಾಗೃತಿ ಮೂಡಿಸಿ ಮಹಿಳೆಯರು ಸ್ವಾವಲಂಬಿ ಬದುಕು ಕಂಡುಕೊಳ್ಳುತ್ತಿರುವುದು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದೆ ಎಂದರು. ವಕೀಲ ವಿನುತಾ ಬಾಬು ಮಾತನಾಡಿದರು. ಇದೇ ಸಂದರ್ಭದಲ್ಲಿ ಜಿಪ ಉಪಾಧ್ಯಕ್ಷೆ ಮಾಲಿನಿಬಾಯಿ ರಾಜಾನಾಯ್ಕರನ್ನು ಸನ್ಮಾನಿಸಲಾಯಿತು. ಮಹಿಳೆಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಕಲ್ಪನ, ನೇತ್ರಾ, ಕವಿತಾ, ಪರ್ವೀನ್, ಚಂದ್ರನಾಯ್ಕ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

