ಚಿಕ್ಕಮಗಳೂರು

ಕುಡಿವ ನೀರಿನ ಸಮಸ್ಯೆ: ಪ್ರತಿಭಟನೆ

Published On :


ಜಿಲ್ಲೆಯ ಗಡಿ ಭಾಗದಲ್ಲಿರುವ ಕುರುಬರ ಬೂದಿಹಾಳ್ ಗ್ರಾಮದಲ್ಲಿ ಹಲವು ದಿನಗಳಿಂದ ವಿದ್ಯುತ್ ಮತ್ತು ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಇದರಿಂದ ಬೇಸತ್ತ ಗ್ರಾಮಸ್ಥರು ಮಂಗಳವಾರ ಪ್ರತಿಭಟನೆ ನಡೆಸಿದರು.
ಗ್ರಾಮದ ಮುಖ್ಯ ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶವನ್ನು ವ್ಯಕ್ತಪಡಿಸಿದರು.
ಒಂದೆಡೆ ವಿದ್ಯುತ್ ಸಮಸ್ಯೆ, ಇನ್ನೊಂದೆಡೆ ಕುಡಿಯುವ ನೀರಿನ ಹಾಹಾಕಾರ. ಇದರಿಂದ ಬೇಸತ್ತ ಜನರು ಖಾಲಿ ಕೊಡಗಳೊಂದಿಗೆ ಪ್ರತಿಭಟನೆ ನಡೆಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕುರುಬರ ಬೂದಿಹಾಳ್ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ವರಲಕ್ಷ್ಮಿ ಶಿವಣ್ಣ, ಈ ಗ್ರಾಮದಲ್ಲಿ ಕುಡಿಯವ ನೀರಿನ ಸಮಸ್ಯೆ ತೀವ್ರಗೊಂಡಿದೆ. ವಿದ್ಯುತ್ ಕಡಿತದಿಂದಾಗಿ ಮಕ್ಕಳಿಗೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಅದುದರಿಂದ ಸ್ವಯಂ ಪ್ರೇರಿತವಾಗಿ ಗ್ರಾಮಸ್ಥರು ಒಟ್ಟಾಗಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ಹೇಳಿದರು.
ಕುಡಿಯುವ ನೀರು ಕೊಡಿ: ಯಗಚಿ ಜಲಾಶಯದಿಂದ ಅರಸೀಕೆರೆ ಪಟ್ಟಣಕ್ಕೆ ಪೈಪ್‌ಲೈನ್ ಮೂಲಕ ನೀರು ತೆಗೆದುಕೊಂಡು ಹೋಗಲಾಗುತ್ತಿದೆ. ಇದೇ ಮಾರ್ಗದಲ್ಲಿರುವ ತಮ್ಮ ಗ್ರಾಮಕ್ಕೆ ಈ ಪೈಪ್‌ಲೈನ್‌ನಿಂದ ಕುಡಿಯುವ ನೀರು ಒದಗಿಸಬೇಕು. ಇದರಿಂದಾಗಿ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದರು.
ಇದೇ ವೇಳೆಗೆ ಗ್ರಾಮಕ್ಕೆ ಭೇಟಿ ನೀಡಿದ ಉನ್ನತ ಶಿಕ್ಷಣ ಸಚಿವ  ಸಿ.ಟಿ. ರವಿ, ಯಗಚಿಯಿಂದ ಕೆ.ಬಿ.ಹಾಳ್ ಮಾರ್ಗವಾಗಿ ಅರಸೀಕೆರೆಗೆ ಕುಡಿಯುವ ನೀರು  ಸರಬರಾಜು ಆಗುತ್ತಿದೆ. ಈ ಗ್ರಾಮಕ್ಕೂ ನೀರು ಕೊಡಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ ಅವರು, ವಿದ್ಯುತ್ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಗ್ರಾಪಂ ಸದಸ್ಯರಾದ ಯಶೋಧಮ್ಮ, ಹನುಮಂತಶೆಟ್ಟಿ, ಚನ್ನಕೇಶವಶೆಟ್ಟಿ, ರಂಗಶೆಟ್ಟಿ, ಗ್ರಾಮಸ್ಥರಾದ ಕಲ್ಲೇಶ್, ಆನಂದ್, ಬೀರೇಗೌಡ, ಕಮಲಮ್ಮ, ಲತಾ ಶಿವಶಂಕರ್, ರಂಗಮ್ಮ, ಸತ್ಯಮೂರ್ತಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.