ಚಿಕ್ಕಮಗಳೂರು

ಬ್ಯಾಂಕಿನಲ್ಲಿ ಜಾತೀಯತೆ ವಿರೋಧಿಸಿ ಧರಣಿ

Published On :

ಚಿಕ್ಕಮಗಳೂರು ಮಾ.19
ಡಿಸಿಸಿ ಬ್ಯಾಂಕ್‌ನಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರು ಮಂಗಳವಾರ ಬ್ಯಾಂಕಿನ ಎದುರು ಧರಣಿ ನಡೆಸಿದರು.
ದಸಂಸ ಜಿಲ್ಲಾ ಸಂಚಾಲಕ ತರೀಕೆರೆ ಎನ್. ವೆಂಕಟೇಶ್ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಡಿಸಿಸಿ ಬ್ಯಾಂಕಿನಲ್ಲಿ ಸೇವೆ ಸಲ್ಲಿಸುತ್ತಿರುವ ಎಂ.ಎಂ. ಕೃಷ್ಣಯ್ಯನವರ ವಿರುದ್ಧ ಕೆಎಟಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಮೇಲ್ಮನವಿಯನ್ನು ಹಿಂಪಡೆಯಬೇಕು. ಮೂರು ವರ್ಷಗಳಿಂದ ತಡೆ ಹಿಡಿದಿರುವ ವಾರ್ಷಿಕ ಬಡ್ತಿಯನ್ನು ಬಿಡುಗಡೆ ಮಾಡಬೇಕು. ವಿನಾಕಾರಣ ಆಂತರಿಕ ವಿಚಾರಣೆಗೆ ಆದೇಶಿಸಿ ವಿಚಾರಣೆ ನಡೆಸಿರುವ ವರದಿಯನ್ನು ರದ್ದುಪಡಿಸಬೇಕು. ಸಿಂಗಟಗೆರೆ ಶಾಖೆಯಲ್ಲಿ ಸೇವಕರಾಗಿರುವ ಬಸವರಾಜು ಅವರ ವೇತನ ತಾರತಮ್ಯ ಮತ್ತು ವಾರ್ಷಿಕ ಬಡ್ತಿ ಮಂಜೂರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ಸಾಲ ಸೌಲಭ್ಯ ನೀಡಿ: ಬ್ಯಾಂಕಿನ ಸದಸ್ಯತ್ವ ಕೋರಿ ಬಂದಿರುವ ಪರಿಶಿಷ್ಟ ಜಾತಿಯ ಎಲ್ಲಾ ಸಹಕಾರ ಸಂಘಗಳಿಗೆ ಬ್ಯಾಂಕಿನ ಸದಸ್ಯತ್ವ ನೀಡಬೇಕು. ಅರ್ಹ ಪರಿಶಿಷ್ಟ ಜಾತಿ ಸದಸ್ಯರಿಗೆ ಹಾಗೂ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಬೇಕು. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಸರ್ಕಾರದ ಶೇ. 18ರ ಮೀಸಲಾತಿ ಕಡ್ಡಾಯವಾಗಿ ಪಾಲಿಸಬೇಕು. ಬ್ಯಾಂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ನೌಕರರಿಗೆ ರೋಸ್ಟರ್  ನಿಯಮದಂತೆ ಮುಂಬಡ್ತಿ ನೀಡಿ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಕೆಲವು ಸವರ್ಣೀಯರಿಗೆ ಬಡ್ತಿ ನೀಡಲಾಗಿದೆ. ಈ ಹುದ್ದೆಗಳಿಗೆ ಅರ್ಹರಾಗಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಕೈಬಿಡಲಾಗಿದೆ. ಉದ್ದೇಶಪೂರ್ವಕವಾಗಿ ಮಾಡಿರುವ ಈ ಲೋಪವನ್ನು ಕೂಡಲೇ ಸರಿಪಡಿಸಬೇಕು. ಕೆಲವು ನೌಕರರ ಮೇಲೆ ದೌರ್ಜನ್ಯ ನಡೆಸುತ್ತಿರುವ ನಿರ್ದೇಶಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 30 ದಿನಗಳೊಳಗೆ ಬೇಡಿಕೆ ಈಡೇರಿಸದೆ ಹೋದರೆ ಮುಂದಿನ ದಿನಗಳಲ್ಲಿ ಅನಿರ್ದಿಷ್ಟ ಕಾಲ  ಮುಷ್ಕರ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ದಸಂಸ ಮುಖಂಡರಾದ ಎಸ್.ಎನ್. ಮಹೇಂದ್ರ, ಎಚ್.ಇ. ದೊಡ್ಡಯ್ಯ, ಎಂ.ಟಿ.  ಶ್ರೀನಿವಾಸ್, ಅಣ್ಣಯ್ಯ, ಗೌರಮ್ಮ, ಚೌಡಪ್ಪ ಹಾಗೂ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.