ಚಿಕ್ಕಮಗಳೂರು

ಸಮಾಜಕ್ಕಾಗಿ ದುಡಿದವರ ಜನ್ಮದಿನ ಆಚರಿಸಿ

Published On :

ಕ.ಪ್ರ.ವಾರ್ತೆ,ಚಿಕ್ಕಮಗಳೂರು, ಮಾ.20
ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು ಮತ್ತು ಸಮಾಜಕ್ಕಾಗಿ ದುಡಿದವರನ್ನು ಜನತೆ ಗುರುತಿಸಿ ಅವರ ಜನ್ಮದಿನವನ್ನು ಆಚರಿಸುವ ಕೆಲಸ ಮಾಡಬೇಕು ಎಂದು ಮೂಡಿಗೆರೆ ಶಾಸಕ ಎಂ.ಪಿ. ಕುಮಾರಸ್ವಾಮಿ ಹೇಳಿದ್ದಾರೆ.
ಜನ್ಮದಿನಾಚರಣೆ: ನಗರದ ಆಶಾಕಿರಣ ಅಂಧಮಕ್ಕಳ ಶಾಲೆಯಲ್ಲಿ ಕರ್ನಾಟಕ ಅಂಧರ ಒಕ್ಕೂಟ ಮತ್ತು ಪ್ರೊ. ಚಂದ್ರಯ್ಯನಾಯ್ಡಿ ಶೈಕ್ಷಣಿಕ ಮತ್ತು ಸಾಮಾಜಿಕ ಅಭಿವೃದ್ದಿ ಟ್ರಸ್ಟ್ ಇತ್ತೀಚೆಗೆ ಏರ್ಪಡಿಸಿದ್ದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸೇವಕ ಡಿ.ಬಿ. ಸುಬ್ಬೇಗೌಡ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ಮತ್ತು ಸಮಾಜಕ್ಕಾಗಿ ದುಡಿದವರನ್ನು ಗುರುತಿಸಿ ಅವರನ್ನು ಗೌರವಿಸುವುದರಿಂದ ಅಂತಹವರ ಸಂಖ್ಯೆ ಹೆಚ್ಚಾಗುವುದರ ಜೊತೆಗೆ ಸಮಾಜಕ್ಕೆ ಗೌರವ ಬರುತ್ತದೆ ಎಂದು ಕಿವಿಮಾತು ಹೇಳಿದರು. ಡಿ.ಬಿ. ಸುಬ್ಬೇಗೌಡರ ಸಾಮಾಜಿಕ ಕಳಕಳಿ, ಸಮಾಜಮುಖಿ ಬದುಕು ಇಂದಿನ ಯುವ ಜನತೆಗೆ ಮಾದರಿಯಾಗಬೇಕು. ಇಂತಹ ಸಮಾಜ ಸೇವಕರ ಮಾರ್ಗದರ್ಶನದಲ್ಲಿ ಯುವಕರು ಮುನ್ನಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಐಟಿ ಕಾಲೇಜಿನ ಪ್ರಾಂಶುಪಾಲ ಡಾ.ಸಿ.ಕೆ. ಸುಬ್ರಾಯ, ಡಿ.ಬಿ. ಸುಬ್ಬೇಗೌಡರ ಸರಳತೆ ಮತ್ತು ಸಜ್ಜನಿಕೆಯನ್ನು ಇಂದಿನ ಯುವಕರು ಅಳವಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಸಾಹಿತಿ ಡಿ.ಎಸ್. ಜಯಪ್ಪಗೌಡ, ವಾಣಿ ಚಂದ್ರಯ್ಯನಾಯ್ಡು, ಕಾಮಧೇನು ಗಣಪತಿ ಕ್ಷೇತ್ರದ ಧರ್ಮಾಧಿಕಾರಿ ಎಂ.ಎಸ್. ನಂಜುಂಡಸ್ವಾಮಿ, ಆಶಾಕಿರಣ ಶಾಲೆಯ ಉಪಾಧ್ಯಕ್ಷ ಕೆ.ಎ. ಈರೇಗೌಡ, ನಿರ್ದೇಶಕ ಗಿರಿಧರ್ ಯತೀಶ್, ಐ.ಎಂ. ಸಣ್ಣತಮ್ಮೇಗೌಡ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.