ಚಿಕ್ಕಮಗಳೂರು

ಕಲ್ಲು ಗಣಿಗಾರಿಕೆ ಸ್ಥಗಿತಕ್ಕೆ ಆಗ್ರಹ

Published On :

ಕ.ಪ್ರ.ವಾರ್ತೆ,ಚಿಕ್ಕಮಗಳೂರು, ಮಾ.20
ತಾಲೂಕಿನ ಮರ್ಲೆ ಗ್ರಾಮದಲ್ಲಿರುವ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸುವಂತೆ ಮರ್ಲೆ ಸೇರಿದಂತೆ ಸುತ್ತಮುತ್ತಲ ಗ್ರಾಮಸ್ಥರು ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಈ ಸಂಬಂಧ ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಮರ್ಲೆ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯಲ್ಲಿ 13 ಗ್ರಾಮಗಳಿದ್ದು, ಇಲ್ಲಿನ ರೈತರು ಅಲ್ಪಸ್ವಲ್ಪ ಭೂಮಿಯನ್ನು ಹೊಂದಿದ್ದು, ಜೀವನಕ್ಕೆ ದಿನಗೂಲಿಯನ್ನು ಅವಲಂಬಿಸಿದ್ದಾರೆ. ಇಲ್ಲಿನ ಸರ್ವೆ ನಂಬರ್ 134ರಲ್ಲಿ ಗೋಮಾಳ ಪ್ರದೇಶವಿದ್ದು, ಇದರ ವಿಸ್ತೀರ್ಣ 415 ಎಕರೆ. ಇಲ್ಲಿನ ಜಾನುವಾರುಗಳಿಗೆ ಮೇವಿಗೆ ಈ ಪ್ರದೇಶ ಅನುಕೂಲಕರವಾಗಿದ್ದು, ಇದೇ ಜಾಗದಲ್ಲಿ ಸಶ್ಮಾನವೂ ಸಹ ಇದೆ. ಇಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯಿಂದ ಗ್ರಾಮಸ್ಥರಿಗೆ ತುಂಬಾ ಅನಾನೂಕೂಲವಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆ ಕಂಡು ಬರುತ್ತಿದೆ ಎಂದು ಹೇಳಿದ್ದಾರೆ.
ಇಲ್ಲಿ ನಡೆಯುತ್ತಿರುವ ಕಲ್ಲು ಗಣಿಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಇದರ ಜತೆಗೆ ಜಿಲ್ಲೆಯ ಎಲ್ಲಾ ಜಲ್ಲಿ ಕ್ರಷರ್‌ಗಳನ್ನು ಇದೇ ಜಾಗದಲ್ಲಿ ಸ್ಥಾಪಿಸುವ  ಹುನ್ನಾರ ನಡೆಯುತ್ತಿದ್ದು, ಇದಕ್ಕೆ  ಕಡಿವಾಣ  ಹಾಕಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರಾದ ಶಿವಕುಮಾರ್, ರಮೇಶ್ ಹಾಗೂ ಗ್ರಾಮಸ್ಥರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.