ಇಂದು ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರದಾನ
ಕ.ಪ್ರ. ವಾರ್ತೆ,ಚಿಕ್ಕಮಗಳೂರು,ಮಾ.21
ನಗರದ ಎಐಟಿ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ಶುಕ್ರವಾರ ಪರಿಸರ ಮಿತ್ರ ಶಾಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಬೆಳಗ್ಗೆ 10.30ಕ್ಕೆ ನಡೆಯಲಿರುವ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ವಿ. ಯಶವಂತ್ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ವಿಜ್ಞಾನ ಕೇಂದ್ರದ ಗೌರವಾಧ್ಯಕ್ಷ ಎ.ಎನ್. ಮಹೇಶ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪುಸ್ತಕ ಬಿಡುಗಡೆ: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಹಿರಿಯ ಪರಿಸರ ಅಧಿಕಾರಿ ಎಸ್. ನಂದಕುಮಾರ್ ಅವರು ಹಸಿರು-ಕನಸು- ನನಸು ಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ. ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಿ. ಶಿವಶಂಕರ್ ಪರಿಸರ ಮಿತ್ರ ಶಾಲಾ ಪ್ರಶಸ್ತಿ ವಿತರಿಸಲಿದ್ದಾರೆ.
ಪರಿಸರದ ಅರಿವು ಮತ್ತು ಭೂಮಿಗೆ ಹತ್ತಿರದ ಬದುಕು, ನಮ್ಮ ಮನೆ, ನಮ್ಮ ಶಾಲೆ ಮತ್ತು ನಮ್ಮೂರಿನಿಂದ ಅರಂಭವಾಗಬೇಕಿದೆ. ಪರಿಸರ ಶಿಕ್ಷಣ ಕಾರ್ಯಕ್ರಮದ ಒಂದು ಪ್ರಯತ್ನವಾಗಿ ಶಿವಮೊಗ್ಗದ ಪರಿಸರ ಅಧ್ಯಯನ ಕೇಂದ್ರ ಪ್ರಾರಂಭಿಕವಾಗಿ ರೂಪಿಸಿದ ಕಾರ್ಯಕ್ರಮವನ್ನು ಜಿಲ್ಲಾ ವಿಜ್ಞಾನ ಕೇಂದ್ರ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದೊಂದಿಗೆ ಹಾಗೂ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಜಿಲ್ಲಾ ಸಾರ್ವಜನಿಕ ಇಲಾಖೆಯ ಸಹಕಾರದೊಂದಿಗೆ ಪರಿಸರ ಮಿತ್ರ ಶಾಲಾ ಪ್ರಶಸ್ತಿಕಾರ್ಯಕ್ರಮ ಜಾರಿಗೆ ತರಲಾಗಿದೆ ಎಂದರು.
ಶಾಲೆಗಳ ಆಯ್ಕೆ: ಹಸಿರು ಶಾಲಾ ಪ್ರಶಸ್ತಿಗೆ ಕಡೂರು ತಾಲೂಕಿನ ಎಂ. ಕೋಡಿಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಎನ್.ಆರ್.ಪುರ ತಾಲೂಕಿನ ಗಾಂಧಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕಡೂರಿನ ಗಿರಿಯಾಪುರದ ಗುರುಕೃಪಾ ಪ್ರೌಢಶಾಲೆ, ಚಿಕ್ಕಮಗಳೂರಿನ ಉಪ್ಪಳ್ಳಿಯ ಮಾಡೆಲ್ ಇಂಗ್ಲೀಷ್ ಶಾಲೆ, ಕೊಪ್ಪ ತಾಲೂಕು ನಾರ್ವೆಯ ಸ್ವಯಂ ಪ್ರಕಾಶ ಸರಸ್ವತೀ ಪ್ರೌಢಶಾಲೆ, ಮೂಗ್ತಿಹಳ್ಳಿಯ ಸರ್ಕಾರಿ ಪ್ರೌಢಶಾಲೆ, ಆಣೂರಿನ ಸರ್ಕಾರಿ ಶಾಲೆ ಸೇರಿದಂತೆ ಜಿಲ್ಲೆಯ ಹಲವು ಶಾಲೆಗಳು ಆಯ್ಕೆಯಾಗಿವೆ.
ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದಿರುವ ಶಾಲೆಗೆ 20 ಸಾವಿರ ನಗದು ಬಹುಮಾನ, 2 ಸಾವಿರ ದ್ವಿತೀಯ ಬಹುಮಾನ, ತೃತೀಯ ಬಹುಮಾನ 1 ಸಾವಿರ ರುಪಾಯಿ ನೀಡಲಾಗುವುದು. ಹಳದಿ ಶಾಲೆಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಲಾಗುವುದು ಎಂದು ಮಹೇಶ್ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

