ಚಿಕ್ಕಮಗಳೂರು

ಭಾಷಾ ತಾರತಮ್ಯಕ್ಕೆ ಕರವೇ ವಿರೋಧ

Published On :

ಕ.ಪ್ರ. ವಾರ್ತೆ,ಮೂಡಿಗೆರೆ,ಮಾ.21
ಪ್ರಮುಖ ರಾಷ್ಟೀಕೃತ ಬ್ಯಾಂಕ್‌ಗಳಲ್ಲಿ ಒಂದಾದ ಭಾರತೀಯ ಸ್ಟೇಟ್ ಬ್ಯಾಂಕ್ ಕನ್ನಡವನ್ನು ಮೂಲೆ ಗುಂಪು ಮಾಡಿ ಆಂಗ್ಲ ಭಾಷೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದು, ಇಂತಹ ಭಾಷಾ ತಾರತಮ್ಯ ನೀತಿ ವಿರೋಧಿಸಿ ಬ್ಯಾಂಕಿನ ವಿರುದ್ಧ ಉಗ್ರ ಹೋರಾಟ ನಡೆಸಲು ನಿರ್ಧರಿಸಿರುವುದಾಗಿ ಕರವೇ ಗೌರಾವಾಧ್ಯಕ್ಷ ಹೊರಟ್ಟಿ ರಘು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮಿಳುನಾಡು, ಕೇರಳ, ಆಂಧ್ರಪ್ರದೇಶಗಳಲ್ಲಿ ಅವರ ವರ ಭಾಷೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಆದರೆ ಕರ್ನಾಟಕದಲ್ಲಿ ಮಾತ್ರ ಅದರಲ್ಲೂ ಮಲೆನಾಡು ಭಾಗಗಳಲ್ಲಿ ಆಂಗ್ಲಕ್ಕೆ ಮೊದಲ ಆದ್ಯತೆ ನೀಡುತ್ತಿದ್ದು. ಕನ್ನಡ ಕಲಿತವನು ಗದ್ದೆ ಕೆಲಸ ಮಾಡಿ ಕೊಂಡು ಸುಮ್ಮನೆ ಕೂರಬೇಕಾದ ಪರಿಸ್ಥಿತಿ ಒದಗಿ ಬಂದಿರುವುದು ದೌರ್ಭಾಗ್ಯ ಎಂದಿದ್ದಾರೆ.
ಕನ್ನಡದ ನೆಲ, ಜಲ ಮತ್ತು ಗಾಳಿ ಬೇಕು ಆದರೇ ಕನ್ನಡ ಮಾತ್ರ ಬೇಡ ಎನ್ನುವ ಬ್ಯಾಂಕುಗಳು, ಆಂಗ್ಲ ಶಾಲಾ ಕಾಲೇಜುಗಳು ಸೇರಿದಂತೆ ಕೆಲವು ಸರ್ಕಾರಿ ಕಚೇರಿಗಳ ವಿರುದ್ಧ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲು ತಿರ್ಮಾನಿಸಿರುವುದಾಗಿ ತಿಳಿಸಿದ್ದಾರೆ. ಕರವೇ ಅಧ್ಯಕ್ಷ ದಾರದಹಳ್ಳಿ ಪ್ರಸನ್ನ, ನಗರಾಧ್ಯಕ್ಷ ಜಿ.ಎಂ. ಧರ್ಮವೀರ್, ಬಾಲರಾಜ್ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.