ಚಿಕ್ಕಮಗಳೂರು

ಕೋದಂಡರಾಮಚಂದ್ರಸ್ವಾಮಿ ಬ್ರಹ್ಮರಥೋತ್ಸವ

Published On :

ಕ.ಪ್ರ. ವಾರ್ತೆ,ಚಿಕ್ಕಮಗಳೂರು,ಮಾ.21
ಇತಿಹಾಸ ಪ್ರಸಿದ್ಧ ಹಿರೇಮಗಳೂರಿನ ಶ್ರೀ ಕೋದಂಡರಾಮಚಂದ್ರಸ್ವಾಮಿಯ ವಾರ್ಷಿಕ ಬ್ರಹ್ಮರಥೋತ್ಸವ ವೈಭವದಿಂದ ಗುರುವಾರ ಜರುಗಿತು.
ಉತ್ಸವದ ಅಂಗವಾಗಿ ಶ್ರೀ ಕೋದಂಡರಾಮಚಂದ್ರಸ್ವಾಮಿಗೆ ಅಭಿಷೇಕ, ಅಲಂಕಾರ, ವಿಶೇಷ ಪೂಜೆ ನಡೆಯಿತು. ನಂತರ ಉತ್ಸವ ಮೂರ್ತಿಯನ್ನು ಸಣ್ಣ ರಥದಲ್ಲಿ ಪ್ರತಿಷ್ಠಾಪಿಸಿ ದೇವಾಲಯದ ಸುತ್ತ ಮೆರವಣಿಗೆ ನಡೆಸಲಾಯಿತು. ಬಳಿಕ ದೇವಾಲಯದ ಮುಂಭಾಗದಲ್ಲಿ ಸಾಲಂಕೃತಗೊಂಡು ಸಜ್ಜಾಗಿ ನಿಂತಿದ್ದ ಬ್ರಹ್ಮರಥದಲ್ಲಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
ಇದೇ ವೇಳೆ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಳ್ಳುತ್ತಿದ್ದಂತೆ ಭಕ್ತರಿಂದ ಭಜನೆ, ನಾದಸ್ವರ, ಗ್ರಾಮೀಣ ವಾದ್ಯಗಳು ಮೊಳಗಿದವು. ಬ್ರಹ್ಮ ರಥದತ್ತ ಹಣ್ಣು ತೂರಿ ಭಕ್ತರು ಸಂಭ್ರಮಿಸಿದರು. ನಂತರ ಸಹಸ್ರಾರು ಭಕ್ತರ ನಡುವೆ ಬ್ರಹ್ಮರಥವನ್ನು ಎಳೆಯಲಾಯಿತು.
ರಥೋತ್ಸವದ ಪ್ರಯುಕ್ತ ಗ್ರಾಮದ ಮನೆ ಮನೆಗಳಲ್ಲಿ ಕೋಸಂಬರಿ ಪಾನಕವನ್ನು ಸಾರ್ವಜನಿಕರಿಗೆ ವಿತರಿಸಲಾಯಿತು. ಬ್ರಹ್ಮರಥ ಗ್ರಾಮದೊಳಗೆ ಸಂಚರಿಸುತ್ತಿದ್ದಂತೆ ಮನೆಗಳ ಮುಂದೆ ಆರತಿ ಎತ್ತಿ, ಪೂಜೆ ಸಲ್ಲಿಸಲಾಯಿತು. ದೇವಾಲಯದಿಂದ ಸಾರ್ವಜನಿಕರ ಅನ್ನ ಸಂತರ್ಪಣೆ ಜರುಗಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.