ನರ್ಸ್ ಅತ್ಯಾಚಾರಕ್ಕೆ ಯತ್ನಿಸಿದ ಬಸ್ ಚಾಲಕ
ಕ.ಪ್ರ. ವಾರ್ತೆ,ಮೂಡಿಗೆರೆ,ಮಾ.21
ತಾಲೂಕಿನ ಕಳಸ ಹೋಬಳಿಯ ತಲಗೋಡು ಗ್ರಾಮದಲ್ಲಿ ನರ್ಸ್ ಒಬ್ಬರ ಮೇಲೆ ಖಾಸಗಿ ಬಸ್ ಚಾಲಕನೊಬ್ಬ ಮಾನಭಂಗಕ್ಕೆ ಪ್ರಯತ್ನಿಸಿದ ಘಟನೆ ನಡೆದಿದೆ.
ಕಳಸ ಪಟ್ಟಣದ ಖಾಸಗಿ ಬಸ್ ಸೆಂಸ್ಥೆಯಲ್ಲಿ ಚಾಲಕನಾಗಿರುವ ತನೂಡಿ ಗ್ರಾಮದ ಚಿದಂಬರ್ ಎಂಬಾತನೇ ಅತ್ಯಾಚಾರ ಯತ್ನ ನಡೆಸಿರುವ ಆರೋಪಿ.
ಈತ ಬುಧವಾರ ಸಂಜೆ ಸುಮಾರು 6.45 ಸಮಯದಲ್ಲಿ ತಲಗೋಡು ಗ್ರಾಮದ ಸ್ನೇಹ ಕ್ಲಿನಿಕ್‌ನ ಬಳಿ ಆರೋಗ್ಯ ಸರಿ ಇಲ್ಲ ಎಂಬ ನೆಪದಲ್ಲಿ ಕ್ಲಿನಿಕ್ ಒಳ ಹೋಗಿದ್ದಾನೆ. ಈ ಸಂದರ್ಭ ಆಕೆಯೊಂದಿಗೆ ಅನುಚಿತವಾಗಿ ವರ್ತಿಸಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಯುವತಿ ಕೂಗಿಕೊಂಡಾಗ, ಕೊಂದು ಹಾಕುವುದಾಗಿ ಬೆದರಿಕೆ ಒಡ್ಡಿ, ಪಕ್ಕದಲ್ಲಿದ್ದ ರೂಂಗೆ ಎಳೆದುಕೊಂಡು ಹೋಗಿ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾನೆ. ಆಗ ಆಕೆ ಕಿರುಚಿಕೊಂಡಿದ್ದರಿಂದ ಆಕೆಯ ಮೇಲೆ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾನೆ. ಪರಾರಿಯಾಗುವ ಸಂದರ್ಭದಲ್ಲಿ 8 ಗ್ರಾಂ ಚಿನ್ನದ ಸರವನ್ನು ಕದ್ದೊಯ್ದಿದ್ದಾನೆ ಎಂದು ಹಲ್ಲೆಗೊಳಗಾಗಿದ್ದ ಯುವತಿ ತನ್ನ ದೂರಿನಲ್ಲಿ ತಿಳಿಸಿದ್ದಾರೆ.
ಹಲ್ಲೆಗೊಳಗಾದ ನರ್ಸ್ ಕಳಸದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ತಾಲೂಕು ಪಂಚಾಯುತ್ ಅಧ್ಯಕ್ಷ ಎಂ.ಎ. ಶೇಷಗಿರಿ, ಕಳಸ ಗ್ರಾಪಂ ಅಧ್ಯಕ್ಷೆ ಉಷಾ, ಮಹಿಳಾ ಸಂಚಾಲಕಿ ಮಮ್ತಾಜ್ ಬೇಗಂ, ನಾಗೇಶ್,ನಾಗಭೂಷಣ್ ಸ್ಥಳಕ್ಕೆ ಭೇಟಿ ನೀಡಿ ಸಾಂತ್ವಾನ ಹೇಳಿ, ಆರೋಪಿಯನ್ನು ಕೂಡಲೇ ಬಂಧಿಸಲು ಒತ್ತಾಯಿಸಿದ್ದಾರೆ.
ಈ ಸಂಬಂಧ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳಸ ಠಾಣಾಧಿಕಾರಿ ರಾಮಚಂದ್ರ ನಾಯಕ್ ಸ್ಥಳ ಪರಿಶೀಲನೆ ಮಾಡಿ ಆರೋಪಿಗಾಗಿ ಬಲೆ ಬೀಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

