ಚಿಕ್ಕಮಗಳೂರು

ನೀರು, ಮಣ್ಣಿನ ಸಂರಕ್ಷಣೆ ಅಗತ್ಯ

Published On :

ಕ.ಪ್ರ. ವಾರ್ತೆ,ತರೀಕೆರೆ,ಮಾ21
ನೀರು ಮತ್ತು ಮಣ್ಣಿನ ಸಂರಕ್ಷಣೆ ಮಾಡುವ ಅಗತ್ಯವಿದೆ ಎಂದು ತರೀಕೆರೆ ಉಪವಿಭಾಗಾಧಿಕಾರಿ ಜಿ. ಅನುರಾಧ ತಿಳಿಸಿದರು.
ಸಮೀಪದ ಬುಕ್ಕಾಂಬುದಿ ಗ್ರಾಮ ಶ್ರೀ ಸಿದ್ದಲಿಂಗೇಶ್ವರ ತಪೋ ಬೆಟ್ಟದಲ್ಲಿ ನಬಾರ್ಡ್ ಪ್ರಾಯೋಜಿತ ಜಿಲ್ಲಾ ಜಲಾನಯನ ಅಭಿವೃದ್ಧಿ ಸಮಿತಿಗಳ ಅನುಭವ ಹಂಚಿಕೆ ಸಮಾವೇಶದ ಉದ್ಘಾಟನೆ ನೆರವೇರಿಸಿ ಮಾತನಾಡಿ, ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದಿದ್ದರಿಂದ ಅಂತರ್ಜಲ ಕುಸಿಯುತ್ತಿದ್ದು, ನೀರಿಗಾಗಿ ಹಾಹಾಕಾರ ಶುರುವಾಗಿದೆ. ರೈತ ಸಮುದಾಯ ಇಡೀ ಪರಿಸ್ಥಿತಿಯನ್ನು ನಿಭಾಯಿಸುವಂತಾಗಲು ಮಳೆ ಬಿದ್ದಾಗ ಅವರ ಜಮೀನುಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ನೀರು ಹಿಂಗಿಸಿದಲ್ಲಿ ಅಂತರ್ಜಲ ಮಟ್ಟ ಸುಧಾರಿಸಿಕೊಳ್ಳುತ್ತದೆ ಎಂದು ಹೇಳಿದರು.
ಸಾವಯವ ಕೃಷಿಯಲ್ಲಿ ತೊಡಗಿ: ಸಾವಯವ ಕೃಷಿಯನ್ನು ತೊಡಗಿಸಿಕೊಂಡಲ್ಲಿ ಉತ್ತಮ ಮಟ್ಟದ ಬೆಳೆ ಹಾಗೂ ಅನಾವಶ್ಯಕ ಗೊಬ್ಬರದ ಆರ್ಥಿಕ ಹೊರೆಯಿಂದ ಮುಕ್ತವಾಗಬಹುದು ಎಂದು ಸಲಹೆ ನೀಡಿದರು.
ಹಾಸನ ನಬಾರ್ಡ್‌ನ ಉಪ ಮಹಾಪ್ರಬಂಧಕ ಎಚ್.ಎಸ್. ನಾಗೇಂದ್ರ ಮಾತನಾಡಿ, ಜಿಲ್ಲೆಯ ತರೀಕೆರೆ ಮತ್ತು ಕಡೂರು ತಾಲೂಕುಗಳಲ್ಲಿ ನಬಾರ್ಡ್ ಜಲಾನಯನ ಅಭಿವೃದ್ಧಿ ನಿಧಿಯಿಂದ ಜಲಾನಯನ ಅಭಿವೃದ್ಧಿ ಚಟುವಟಿಕೆಗಳಿಗಾಗಿ ವಿಶೇಷ ಕಾರ್ಯಕ್ರಮದಡಿ ಸಂಪೂರ್ಣ ಅನುದಾನ ನೀಡಿ ಮಣ್ಣಿನ ಸಂರಕ್ಷಣೆ ಕಾರ್ಯಕ್ರಮಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ರೈತರು ಅದನ್ನು ಸಮರ್ಪಕವಾಗಿ ಅಳವಡಿಸಿಕೊಳ್ಳಲು ತಿಳಿಸಿದರು.
ಬುಕ್ಕಾಂಬುದಿ ಗ್ರಾಮ ಜಲಾನಯನ ಸಮಿತಿ ಅಧ್ಯಕ್ಷ ಬಿ.ಓ. ಮಹೇಂದ್ರ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚಿಕ್ಕಮಗಳೂರು ಕೃಷಿ ಚಟುವಟಿಕೆಯ ಸಹಾಯಕ ನಿರ್ದೇಶಕ ಲೋಕೇಶ್, ಜಿಲ್ಲಾ ಜಲಾನಯನ ಅಧಿಕಾರಿ ಸೀತಾ, ಕಾವೇರಿ ಗ್ರಾಮೀಣ ಬ್ಯಾಂಕಿನ ಹಿರಿಯ ಕ್ರೆಡಿಟ್ ವ್ಯವಸ್ಥಾಪಕ ಶಂಕರ್ ಕನವಳ್ಳಿ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಅನುರಾಧ ನರಹರಿ ಅವರು ಮಾತನಾಡಿದರು.  
ಜಿಲ್ಲೆಯ ಎಲ್ಲ ಗ್ರಾಮ ಜಲಾನಯನ ಸಮಿತಿಗಳ ಪರವಾಗಿ ರೈತರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಜನಚಿಂತನ ಸಂಸ್ಥೆ ಅಧ್ಯಕ್ಷ ಎನ್. ವೀರಭದ್ರಪ್ಪ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮಕ್ಕೆ ಮುನ್ನ ತರೀಕೆರೆ ಉಪವಿಭಾಗಾಧಿಕಾರಿ ಜಿ. ಅನುರಾಧ ಶ್ರೀ ವಿರೂಪಾಕ್ಷೇಶ್ವರ ದೇವಸ್ಥಾನದ ಬಳಿ ಪೂರ್ಣಕುಂಬ, ಕಲಾ ತಂಡಗಳ ಮೆರವಣಿಗೆಗೆ ಚಾಲನೆ ನೀಡಿದರು.
ಜನಚಿಂತನ ಸಂಸ್ಥೆ ಅಧ್ಯಕ್ಷ ಎನ್. ವೀರಭದ್ರಪ್ಪ ನಿರೂಪಿಸಿದರು. ಸ್ಪಂದನ ಸಂಸ್ಥೆಯ ಲಕ್ಷ್ಮಣ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.