ರಾಜಕೀಯಕ್ಕೆ ಡಾಕ್ಟರ್ ಗುಡ್ ಬೈ
ಕ.ಪ್ರ.ವಾರ್ತೆ, ಚಿಕ್ಕಮಗಳೂರು. ಮಾ.23
ರಾಜಕೀಯ ಕೆಲವರಿಗೆ ವೃತ್ತಿಯಾಗಿದೆ. ಒಮ್ಮೆ ಒಳಹೊಕ್ಕರೆ ಸಾಕು ಅವರು ಮತ್ತೆ ಅಲ್ಲಿಂದ ಹೊರ ಬರಲುಇಷ್ಟಪಡುವುದಿಲ್ಲ.
ತಾವು ಅಧಿಕಾರದಲ್ಲಿ ಇರುವಾಗಲೇ ತಮ್ಮ ಕುಟುಂಬದವರನ್ನು ರಾಜಕೀಯಕ್ಕೆ ಕರೆ ತಂದು ಮಾರ್ಗದರ್ಶನ ಮಾಡುತ್ತಿರುವ ಇಂದಿನ ಪರಿಸ್ಥಿತಿಯಲ್ಲಿ ಆಡಳಿತ ಪಕ್ಷದ ಜಿಲ್ಲೆಯ ಕಡೂರು ಕ್ಷೇತ್ರದ ಶಾಸಕ ಡಾ. ವೈ.ಸಿ. ವಿಶ್ವನಾಥ್ ರಾಜಕೀಯಕ್ಕೆ ಗುಡ್ ಬೈ ಹೇಳುವ ತೀರ್ಮಾನವನ್ನು ತೆಗೆದುಕೊಂಡಿದ್ದಾರೆ.
ಇವರು ಶಾಸಕರಾಗಿದ್ದು ಕೇವಲ ಎರಡೂವರೆ ವರ್ಷಗಳು ಮಾತ್ರ. ಈ ಅವಧಿ ಇನ್ನು ಕೆಲವೇ ದಿನಗಳಲ್ಲಿ ಮುಕ್ತಾಯಗೊಳ್ಳಲಿದೆ. ರಾಜಕೀಯ ವ್ಯವಸ್ಥೆಯಿಂದ ಬೇಸತ್ತು, ಮರಳಿ ಮಾತೃ ವೃತ್ತಿ ವೈದ್ಯರಾಗಿಯೇ ಮುಂದುವರಿಯಲು ನಿರ್ಧರಿಸಿದ್ದಾರೆ.
ಪ್ರಥಮ ಶಾಸಕ: ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಬಾರಿ ಗೆಲವು ಸಾಧಿಸಿದ್ದು ಕಾಂಗ್ರೆಸ್ ಪಕ್ಷ. ನಂತರದ ಸ್ಥಾನ ಜನತಾದಳಕ್ಕೆ. ಈ ಕ್ಷೇತ್ರದಲ್ಲಿ ಸತತವಾಗಿ ನಾಲ್ಕು ಬಾರಿ ಶಾಸಕರಾಗಿದ್ದ ಕೆ.ಎಂ. ಕೃಷ್ಣಮೂರ್ತಿ ಅವರು ಅನಾರೋಗ್ಯದಿಂದ ನಿಧಾನರಾದರು. ಆಗ 2010ರ ಸೆಪ್ಟಂಬರ್ ತಿಂಗಳಲ್ಲಿ ಈ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯಲ್ಲಿ ಡಾ. ವೈ.ಸಿ. ವಿಶ್ವನಾಥ್ ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದರು.
ಆಗ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು. ಈ ಕ್ಷೇತ್ರದ ಉಪ ಚುನಾವಣೆಯ ಉಸ್ತುವಾರಿಯನ್ನು ಬಿಜೆಪಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ವಹಿಸಿದ್ದರು. ರಾಜ್ಯ ಬಿಜೆಪಿ ಜಾತಕದಲ್ಲಿ ಯಾವುದೇ ಗ್ರಹಗಳ ದೋಷಗಳಿರಲಿಲ್ಲ. ಎಲ್ಲರೂ ಒಟ್ಟಾಗಿ ಶ್ರಮಿಸಿದ್ದರ ಫಲವಾಗಿ ಮೊಟ್ಟ ಮೊದಲ ಬಾರಿಗೆ ಕಡೂರು ಕ್ಷೇತ್ರದಲ್ಲಿ ಬಿಜೆಪಿಯ ಕಮಲ ಅರಳಿತು.
ತಮ್ಮದೆ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ಕ್ಷೇತ್ರದ ಅಭಿವೃದ್ಧಿಗಾಗಿ ಏನನ್ನು ಮಾಡಲು ಸಾಧ್ಯವಾಗಿಲ್ಲ ಎಂಬ ಬೇಸರದಿಂದ ರಾಜಕೀಯದಿಂದ ಹಿಂದೆ ಸರಿಯಲು ತೀರ್ಮಾನ ತೆಗೆದುಕೊಂಡಿದ್ದಾರೆ.
-ಆರ್. ತಾರಾನಾಥ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

