ಚಿಕ್ಕಮಗಳೂರು

ಪರೀಕ್ಷಾ ಶುಲ್ಕ ಕಡಿತಕ್ಕೆ ಆಗ್ರಹಿಸಿ ಪ್ರತಿಭಟನೆ

Published On :

ಕ.ಪ್ರ.ವಾರ್ತೆಮೊಳಕಾಲ್ಮುರು ಮಾ.23
ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಗೆ ಬರುವ ಪದವಿ ಕಾಲೇಜುಗಳಲ್ಲಿ ಪ್ರತಿ ಸೆಮಿಸ್ಟರ್‌ಗೆ ಅಂಕ ಪಟ್ಟಿ ಶುಲ್ಕದ ಜೊತೆಯಲ್ಲಿ ತೆಗೆದುಕೊಳ್ಳುವ ಪರೀಕ್ಷಾ ಶುಲ್ಕ ಸೇರಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆಯಾಗುತ್ತಿದ್ದು, ನಿಗದಿಪಡಿಸಿದ ಶುಲ್ಕವನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಒಕ್ಕೂಟದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಪದವಿ ತರಗತಿಗಳಲ್ಲಿ ಪ್ರತಿ ಸೆಮಿಸ್ಟರ್‌ಗೆ 115 ರಂತೆ ಅಂಕಪಟ್ಟಿ ಶುಲ್ಕ ನಿಗದಿಗೊಳಿಸಿ ಈಗ ಮುನ್ನೂರ ನಲವತ್ತು ರುಪಾಯಿ ಪರೀಕ್ಷಾ ಶುಲ್ಕ ಹೆಚ್ಚುವರಿ ಮಾಡಲಾಗಿದೆ. ಇದರಿಂದ ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ತೊಂದರೆಯಾಗುತ್ತಿದ್ದು, ಕೂಡಲೇ ಸರ್ಕಾರ ನಿಗದಿಗೊಳಿಸಿರುವ ಶುಲ್ಕವನ್ನು ಕಡಿತಗೊಳಿಸುವಂತೆ ಆಗ್ರಹಿಸಿದರು.
ವಿದ್ಯಾರ್ಥಿಗಳಿಗೆ ಹೊರೆ: ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುವುದೇ ಕಷ್ಟವಾಗಿದೆ. ಶುಲ್ಕವನ್ನು ಏರಿಕೆ ಮಾಡಿದರೆ ಅವರು ವಿದ್ಯಾಭ್ಯಾಸ ಮೊಟಕುಗೊಳಿಸಬೇಕಾಗುತ್ತದೆ. ಇದರಿಂದ ಶೈಕ್ಷಣಿಕ ಮಟ್ಟ ಕುಸಿತಕ್ಕೆ ಕಾರಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸರ್ಕಾರ ಗಮನ ಹರಿಸಿ ವಿದ್ಯಾರ್ಥಿಗಳಿಗೆ ನಿಗದಿಪಡಿಸಿದ ಶುಲ್ಕವನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸಿ ತಹಶಿಲ್ದಾರರಿಗೆ ಮನವಿ ಸಲ್ಲಿಸಿದರು.  
ಎಐಎಸ್‌ಎಫ್ ಅಧ್ಯಕ್ಷ ಕೆ.ಎಚ್. ಬೀರಲಿಂಗಪ್ಪ, ಉಪಾಧ್ಯಕ್ಷ ಎಸ್.ಟಿ. ಮಂಜುನಾಥ, ಕಾರ್ಯದರ್ಶಿ, ಕೆ.ಎಚ್. ರಾಘವೇಂದ್ರ, ಶಿವಲಿಂಗಪ್ಪ, ಎಸ್. ಶಿವಣ್ಣ, ಕೆ. ಪ್ರಕಾಶ, ಎಚ್. ಮಂಜಣ್ಣ, ಎಚ್.ಸಿ. ಮಹಾಂತೇಶ ಪ್ರತಿಭಟನೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.