ಚಿಕ್ಕಮಗಳೂರು

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಜನಜಾಗೃತಿ ಕಾರ್ಯಕ್ರಮ

Published On :

ಕ.ಪ್ರ.ವಾರ್ತೆ,ಚಿಕ್ಕಮಗಳೂರು, ಮಾ. 23
ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರ್ಪಡೆ ಮತ್ತು ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅರಿವು ಕಾರ್ಯಕ್ರಮಗಳನ್ನು ಏರ್ಪಡಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ. ಶಿವಶಂಕರ್ ಹೇಳಿದ್ದಾರೆ.
 ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಶುಕ್ರವಾರ ನಡೆದ ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣೆಯಲ್ಲಿ ಪಾಲ್ಗೊಳ್ಳುವಿಕೆ (ಸ್ವೀಪ್) ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಯುವ ಜನರು, ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳನ್ನು ಈ ಜಾಗೃತಿ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಲಾಗುವುದು. ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿಯನ್ನು ನೀಡಲಾಗುವುದು ಎಂದರು.
ಜಾಗೃತಿ ಕಾರ್ಯಕ್ರಮ: ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಮತದಾನದ ಮಹತ್ವ ಕುರಿತು ಸಂದೇಶಗಳನ್ನು ಸಾರುವ ಫಲಕಗಳನ್ನು ಜಿಲ್ಲೆಯ ವಿವಿಧೆಡೆ ಅಳವಡಿಸಲಾಗುವುದು. ಜಿಲ್ಲೆಯ ಎಲ್ಲಾ ನಗರ ಪ್ರದೇಶಗಳಲ್ಲಿ, ಗ್ರಾಮ ಪಂಚಾಯತಿಗಳಲ್ಲೂ ಜಾಗೃತಿ ಕಾರ್ಯಕ್ರಮ ನಡೆಯಲಿದೆ.  
 ಕಾಲೇಜುಗಳಲ್ಲಿ ಭಾಷಣ, ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗುವುದು ಎಂದ ಅವರು, ನಗರ- ಪಟ್ಟಣ ಪ್ರದೇಶಗಳಲ್ಲಿ ಜಾಥಾ ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುವುದು ಎಂದು ಹೇಳಿದರು.
ಕರಪತ್ರ ವಿತರಣೆ: ಮತದಾನದ ಮಹತ್ವ ತಿಳಿಸುವ ಕರಪತ್ರಗಳ ವಿತರಣೆ, ಕಾಲೇಜು ಹಾಸ್ಟೆಲ್‌ಗಳಲ್ಲಿ ವಿವಿಧ ಕಾರ್ಯಕ್ರಮ, ಯುವಜನರು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸಮಾವೇಶ ನಡೆಸಿ ಜಾಗೃತಿ ಮೂಡಿಸಲಾಗುವುದು. ಬೂತ್ ಮಟ್ಟದ ಅಧಿಕಾರಿಗಳಿಗೂ ತರಬೇತಿ ನೀಡಲಾಗುವುದು ಎಂದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷ್ಮೀನರಸಯ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.